ಶಿವಮೊಗ್ಗ, ಮಾ. 31: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿವಮೊಗ್ಗ, ಸಾಗರ ಸೇರಿದಂತೆ ವಿವಿಧ ತಾಲೂಕುಗಳ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿದ್ದ ಅಧಿಕಾರಿ – ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಚುನಾವಣಾ ಮಾದರಿ ನೀತಿ – ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಯಾವುದೇ ಗೊಂದಲ, ಗಡಿಬಿಡಿ ಆಸ್ಪದವಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

