ಎರಡು ಚೆಕ್ ಪೋಸ್ಟ್ ಗಳಲ್ಲಿ 1.60 ಕೋಟಿ ರೂ. ವಶ..!

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಶಿವಮೊಗ್ಗ, ಏ. 1: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ  ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡುತ್ತಿದ್ದ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.

ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ, ಬುಲೆರೋ ಕಾರಿನಲ್ಲಿ 1.40 ಕೋಟಿ ರೂ. ಪತ್ತೆಯಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್ ನಲ್ಲಿ ವಾಹನವೊಂದರಲ್ಲಿ 20 ಲಕ್ಷ ರೂ. ಪತ್ತೆಯಾಗಿದೆ. ಶನಿವಾರ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ.

ತಪಾಸಣೆ: ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ಈ ಚೆಕ್ ಪೋಸ್ಟ್ ಗಳು ದಿನದ 24 ಗಂಟೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *