ಶಿವಮೊಗ್ಗ (shivamogga), ಏ. 2: ಸ್ನೇಹಿತರ ನಡುವೆ ಏರ್ಪಟ್ಟ ಕಲಹ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರಕೊಪ್ಪದಲ್ಲಿ ಏ. 2 ರಂದು ನಡೆದಿದೆ.
ದೇವರಾಜ್ (31) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೆಂಕಟೇಶ್ (36) ಆರೋಪಿಯಾಗಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವೆಂಕಟೇಶ್ ಹಾಗೂ ಕೊಲೆಗೀಡಾದ ದೇವರಾಜ್ ಸ್ನೇಹಿತರಾಗಿದ್ದಾರೆ. ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಕೈ ಕೈ ಮಿಲಾವಣೆಯಾಗಿದೆ.
ಈ ವೇಳೆ ವೆಂಕಟೇಶ್ ಗುದ್ದಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ದೇವರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.j
Shivamogga, Apr. 2: An incident that ended in the murder of a person following a dispute between friends took place on Apr. 2 in Tyavarakoppa, on the outskirts of Shivamogga city.

