shimoga | ಪತ್ನಿಯ ಹತ್ಯೆ : ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್!

shimoga | Wife's murder: Shivamogga court sentences husband to life imprisonment! shimoga | ಪತ್ನಿಯ ಹತ್ಯೆ : ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್!

ಶಿವಮೊಗ್ಗ (shivamogga), ಏ. 9: ವರದಕ್ಷಿಣೆ ವಿಚಾರಕ್ಕೆ ಸಂಬಂಧಿಸಿದಂತೆ, ಚೂರಿಯಿಂದ ಇರಿದು ಪತ್ನಿಯ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏ. 8 ರಂದು ತೀರ್ಪು ನೀಡಿದೆ.

ಶಿವಮೊಗ್ಗ ತಾಲೂಕು ದುಮ್ಮಳ್ಳಿ ಗ್ರಾಮದ ನಿವಾಸಿ ಕರುಣಾಕರ (36) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. ಜೀವಾವಧಿ ಶಿಕ್ಷೆಯ ಜೊತೆಗೆ 1. 85 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಪಲ್ಲವಿ ಬಿ ಆರ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪಾ ಪಿ ಓ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : ವರದಕ್ಷಿಣೆ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷೆಗೊಳಗಾದ ಕರುಣಾಕರನು, ಪತ್ನಿ ಅಮಿತಾ (27) ಅವರಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರವಾಗಿ 20-9-2022 ರಂದು ಪತ್ನಿಗೆ ಹಿಂಸೆ ನೀಡಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ.

ಈ ಕುರಿತಂತೆ ಮೃತ ಅಮಿತಾ ಅವರ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಮಂಜುನಾಥ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

Shivamogga, Apr. 9: The 2nd Additional District and Sessions Court of Shivamogga has sentenced a husband to life imprisonment for stabbing his wife to death in a dowry case. The verdict was delivered on Apr. 8.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →