Retired DG-IGP Om Prakash Rao who served as SP in Shimoga brutally murdered! ಶಿವಮೊಗ್ಗದಲ್ಲಿ ಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದ ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!

bengaluru | ಬೆಂಗಳೂರು : ನಿವೃತ್ತ ಡಿಜಿ – ಐಜಿಪಿ ಓಂ ಪ್ರಕಾಶ್ ರಾವ್ ಭೀಕರ ಕೊಲೆ!

ಬೆಂಗಳೂರು (Bangalore), ಏ. 20: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಮಹಾ ನಿರ್ದೇಶಕ ಓಂ ಪ್ರಕಾಶ್ ರಾವ್ (68) ಅವರು, ಮನೆಯಲ್ಲಿಯೇ ಬರ್ಬರವಾಗಿ ಕೊಲೆಗೀಡಾದ ಘಟನೆ ಏ. 20 ಸಂಜೆ ನಡೆದಿದೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಓಂ ಪ್ರಕಾಶ್ ರಾವ್ ಅವರು ವಾಸವಾಗಿದ್ದರು. ಚೂರಿಯಿಂದ ಏಳೆಂಟು ಬಾರಿ ಇರಿದು ಅವರನ್ನು ಹತ್ಯೆ ಮಾಡಲಾಗಿದೆ. ಅವರ ಪತ್ನಿ ಪಲ್ಲವಿ ಅವರ ಮೇಲೆ ಕೊಲೆ ಆರೋಪ ಕೇಳಿಬಂದಿದ್ದು, ಅವರೇ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿದ್ಧಾರೆ ಎಂದು ತಿಳಿದುಬಂದಿದೆ. 

ಇದರ ಆಧಾರದ ಮೇಲೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ಓಂ ಪ್ರಕಾಶ್ ರಾವ್ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮನೆಯಲ್ಲಿಯೇ ಇದ್ದ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. 

ಕೌಟಂಬಿಕ ಕಲಹದ ವಿಚಾರದ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ರಾವ್ ಅವರ ಹತ್ಯೆ ನಡೆದಿದೆ ಎಂದು ಹೇಳಲಾಗಿದ್ದು, ನಿಖರ ಕಾರಣಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ. ನಿವೃತ್ತ ಡಿಜಿ – ಐಜಿಪಿಯ ಬರ್ಬರ ಹತ್ಯೆಯು, ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

ವಿವಿಧೆಡೆ ಕಾರ್ಯ : 1981ರ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಓಂ ಪ್ರಕಾಶ್ ರಾವ್ ಅವರು, 38 ನೇ ಡಿಜಿ ಮತ್ತು ಐಜಿಪಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಈ ಹಿಂದೆ ಓಂ ಪ್ರಕಾಶ್ ರಾವ್ ಅವರು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿಯಾಗಿಯೂ ಕಾರ್ಯನಿರ್ವಹಣೆ ಮಾಡಿದ್ದರು.

Bengaluru, Apr. 20: Om Prakash Rao (68), a retired Director General of the Karnataka State Police Department, was brutally murdered at his home on the evening of Apr. 20.

L

Shivamogga: Heavy rain accompanied by thunder and lightning! ಶಿವಮೊಗ್ಗ: ಗುಡುಗು ಬಿರುಗಾಳಿ ಸಹಿತ ಭಾರೀ ಮಳೆ! Previous post shimoga rain | ಶಿವಮೊಗ್ಗ : ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆ!
shimoga APMC vegetable prices | Details of vegetable prices for October 10 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 10 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 21 ರ ತರಕಾರಿ ಬೆಲೆಗಳ ವಿವರ