
bengaluru | ನಾಳೆಯೇ SSLC ಫಲಿತಾಂಶ : ಎಷ್ಟು ಗಂಟೆಗೆ ರಿಸಲ್ಟ್? ನೋಡೋದು ಹೇಗೆ?
ಬೆಂಗಳೂರು (bangalore), ಮೇ 1: ಕಳೆದ ಮಾರ್ಚ್ – ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ಪ್ರಕಟಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಿಸುವ ಕುರಿತಂತೆ 02-05-2025 ರ ಬೆಳಿಗ್ಗೆ 11-30 ಕ್ಕೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಶಿಕ್ಷಣ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12. 30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
21-03-2025 ರಿಂದ 04-04-2025 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು. ಪ್ರಸ್ತುತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿತ್ತು.
Bangalore, May 1: The results of the SSLC examination held in March-April will be announced on May 2. The Karnataka Examination Board has announced information in this regard. The Education Minister will officially announce the results. After 12.30 pm, the SSLC results can be viewed on the website https://karresults.nic.in #sslc, #sslc result, #sslc exam, #sslc, #sslc result announce,
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ…