ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!

ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ.

ಅನುಮತಿಯಿಲ್ಲದೆ ಕಾಂಗ್ರೆಸ್ ಶಾಸಕರ ಪರ ವಾಹನದಲ್ಲಿ ಪ್ರಚಾರ : ಕೇಸ್ ದಾಖಲು

***********************************************

ಶಿವಮೊಗ್ಗ, ಎ. 4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.

ಶಿವಮೊಗ್ಗ: ಎ. 4 ರಂದು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂ. ಮೌಲ್ಯದ, 119 ಕ್ವಿಂಟಾಲ್ ತೂಕದ 460 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ತೀರ್ಥಹಳ್ಳಿ : ಎ. 3 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡಲಾಗುತ್ತಿದ್ದ 95,890 ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಎ.4 ರಂದು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1.40 ಲಕ್ಷ ರೂ. ಮೌಲ್ಯದ 50 ಗ್ಯಾಸ್ ಸ್ಟವ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ : ಎ. 3 ರಂದು ಯಾವುದೇ ಅನುಮತಿಯಿಲ್ಲದೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಚ್.ಕೆ.ಜಂಕ್ಷನ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ವಾಹನ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಾಗರ: ಎ.3 ರಂದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 2.30 ಲಕ್ಷ ರೂ. ಮೊತ್ತದ ಬಟ್ಟೆ-ಗೃಹೋಪಯೋಗಿ ವಸ್ತುಗಳು, ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1 ಲಕ್ಷ ರೂ. ಮೌಲ್ಯದ ಕಾಫಿ-ಟೀ ಪುಡಿ, ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1.38 ಲಕ್ಷ ರೂ. ಮೌಲ್ಯದ ಹಾರ್ಡ್ ವೇರ್ ಪರಿಕರಗಳು,

ಲಗೇಜ್ ವಾಹನದಲ್ಲಿ ಕೊಂಡೊಯ್ಯಲಾಗುತ್ತಿದ್ದ 1.50 ಲಕ್ಷ ರೂ. ಮೌಲ್ಯದ ಅಡುಗೆ ಎಣ್ಣೆ-ಜ್ಯೂಸ್ ಪ್ಯಾಕ್ ಹಾಗೂ ವಾಹನವೊಂದರಲ್ಲಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬಟ್ಟೆ ಮತ್ತು ಹಾರ್ಡ್ ವೇರ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *