Bhadravati | Police firing again in Bhadravati: Murder case accused shot in the leg! bhadravati | ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು : ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು!

bhadravati | ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು : ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು!

ಭದ್ರಾವತಿ (bhadravathi), ಮೇ 6: ಕೊಲೆ ಪ್ರಕರಣದ ಆರೋಪಿ ಓರ್ವನ ಕಾಲಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ ಮೇ 6 ರಂದು ಭದ್ರಾವತಿ ನಗರದಲ್ಲಿ ನಡೆದಿದೆ.

ಅರುಣ್ ಕುಮಾರ್ (19) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆರೋಪಿಯನ್ನು ಹಾಗೂ ಈತನ ದಾಳಿಯಿಂದ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ರಿಕೆಟ್ ವಿಚಾರದಲ್ಲಿ ಏರ್ಪಟ್ಟ ಕಲಹಕ್ಕೆ ಸಂಬಂಧಿಸಿದಂತೆ, ಭದ್ರಾವತಿ ನಗರದ ಅಶ್ವಥ್ ನಗರದಲ್ಲಿ ಮೇ 5 ರ ರಾತ್ರಿ ಅರುಣ್ (23) ಎಂಬ ಯುವಕನ ಕೊಲೆ ನಡೆದಿತ್ತು. ಸದರಿ ಪ್ರಕರಣದಲ್ಲಿ ಅರುಣ್ ಕುಮಾರ್ ಸೇರಿದಂತೆ ಇತರರು ಆರೋಪಿಯಾಗಿದ್ದರು. ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದ.

ಈತನಿದ್ದ ಸ್ಥಳದ ಮಾಹಿತಿ ಅರಿತ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಕೃಷ್ಣಕುಮಾರ್ ಮತ್ತವರ ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ ಆರೋಪಿಯು ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲೆತ್ನಿಸಿದ್ದ. ತಕ್ಷಣವೇ ಸಬ್ ಇನ್ಸ್’ಪೆಕ್ಟರ್ ಆರೋಪಿ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದಿದ್ದಾರೆ.

ಆರೋಪಿ ವಿರುದ್ದ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ 5 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಮಾಧ್ಯಮ ಸಂದೇಶದಲ್ಲಿ ತಿಳಿಸಿದ್ದಾರೆ.

Bhadravati, May 6: An incident occurred in Bhadravati city on May 6 when the police shot and arrested an accused in a murder case. Arun Kumar (19) has been identified as the arrested accused. The injured accused and the police personnel injured in his attack have been admitted to Bhadravati Government Hospital.

Disruption in drinking water supply in Shivamogga city for two days: When? ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಯಾವಾಗ? Previous post shimoga | ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ : ಯಾವಾಗ? ಕಾರಣವೇನು?
shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 7 ರ ತರಕಾರಿ ಬೆಲೆಗಳ ವಿವರ