ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ

: ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಶಿವಮೊಗ್ಗ, ಎ. 5:   ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಮೊಬೈಲ್ ಕಳೆದುಹೋದ ಸಂದರ್ಭದಲ್ಲಿ, ಸಿಇಐಆರ್ ಸಾಫ್ಟ್’ವೇರ್ ತಂತ್ರಜ್ಞಾನದ ಮೂಲಕ ಹೇಗೆ ಪತ್ತೆ ಹಚ್ಚಿಕೊಡಲಾಗುತ್ತದೆ ಎಂಬುವುದರ ಬಗ್ಗೆ ಸಾರ್ವಜನಿಕರಿಗೆ ಸೈಬರ್ ಠಾಣೆ ಪೊಲೀಸರು ತಿಳಿ ಹೇಳಿದರು.

ಆನ್’ಲೈನ್ ಆಧಾರಿತ ವ್ಯವಹಾರದ ವೇಳೆ, ಒಟಿಪಿ ನಂಬರ್ ಹೇಳುವಂತೆ ಮೊಬೈಲ್ ಫೋನ್ ಗಳಿಗೆ ಅನಾಮಧೇಯ ಕರೆ-ಸಂದೇಶಗಳು ಆಗಮಿಸಿದ ವೇಳೆ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತಂತೆ ಸಲಹೆ-ಸೂಚನೆಗಳನ್ನು ಸಿಬ್ಬಂದಿಗಳು ನೀಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್, ಜಗದೀಶ್, ಹುಂಚ ಪೊಲೀಸ್ ಔಟ್ ಪೋಸ್ಟ್ ಸಿಬ್ಬಂದಿ ಮಂಜುನಾಥ್ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *