ಶಿವಮೊಗ್ಗ (shivamogga), ಮೇ 13: ಶಿವಮೊಗ್ಗ ನಗರದ ವಿವಿಧೆಡೆ ಮೇ 13 ರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಯಿತು. ಬಿಸಿಲ ಬೇಗೆಗೆ ಕಾದ ಕಾವಲಿಯಂತಾಗಿದ್ದ ಇಳೆಯು ತಂಪಾಯಿತು.
ಕಳೆದ ಕೆಲ ದಿನಗಳಿಂದ ಮುಂಗಾರು ಪೂರ್ವ ಮಳೆ ಕಣ್ಮರೆಯಾಗಿತ್ತು. ಮತ್ತೊಂದೆಡೆ ಬಿಸಿಲ ಬೇಗೆಯ ಪ್ರಮಾಣ ಹೆಚ್ಚಾಗಿತ್ತು. ಈ ನಡುವೆ ಮಂಗಳವಾರ ಸಂಜೆ ಬಿದ್ದ ಧಾರಾಕಾರ ಮಳೆ ನಾಗರಿಕರಲ್ಲಿ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಮಾಡಿತು.
ಸರಿಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿದ್ದ ಭಾರಿ ಮಳೆಯಿಂದ ನಗರದ ಹಲವೆಡೆ ರಸ್ತೆಯ ಮೇಲೆಯೇ ಮಳೆ ನೀರು ಹರಿದು ಹೋಯಿತು. ಇದರಿಂದ ಜನ – ವಾಹನ ಸಂಚಾರಕ್ಕೆ ಧಕ್ಕೆಯಾಗುವಂತಾಯಿತು.
ಮತ್ತೊಂದೆಡೆ ಭಾರತೀಯ ಹವಾಮಾನ ಇಲಾಖೆಯು ಮುಂದಿನ ಕೆಲ ದಿನಗಳವರೆಗೆ ಮಲೆನಾಡಿನ ಪ್ರದೇಶಗಳು ಸೇರಿದಂತೆ ರಾಜ್ಯದ ವಿವಿಧೆಡೆ ಮುಂಗಾರು ಪೂರ್ವ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದೆ.
Shivamogga, May 13: Heavy rain accompanied by thunder and lightning lashed various parts of Shivamogga city on the evening of May 13.
The pre-monsoon rains had disappeared for the past few days. On the other hand, the scorching heat had increased. Meanwhile, the torrential rains that fell on Tuesday evening brought a sigh of relief among the citizens.

