ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ

ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಖಡಕ್ ಸೂಚನೆ  

****************************************************************

ಶಿವಮೊಗ್ಗ, ಏ. 5 : ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಕೇಸ್ ದಾಖಲಿಸಿ: ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಕೇಸ್ ದಾಖಲಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿದರು. ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದರು.

ನಿಗಾವಹಿಸಿ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಂಡು ವಶ ಹೆಚ್ಚಾಗಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *