shimoga | Bhadravati - Channagiri - Chikkajajur new railway line: Railway Board approves final survey! shimoga | ಭದ್ರಾವತಿ - ಚನ್ನಗಿರಿ - ಚಿಕ್ಕಜಾಜೂರು ನೂತನ ರೈಲು ಮಾರ್ಗ : ಅಂತಿಮ ಸಮೀಕ್ಷೆಗೆ ರೈಲ್ವೆ ಮಂಡಳಿ ಒಪ್ಪಿಗೆ!

shimoga | ಭದ್ರಾವತಿ – ಚನ್ನಗಿರಿ – ಚಿಕ್ಕಜಾಜೂರು ನೂತನ ರೈಲ್ವೆ ಮಾರ್ಗ : ಅಂತಿಮ ಸಮೀಕ್ಷೆಗೆ ಒಪ್ಪಿಗೆ!

ಶಿವಮೊಗ್ಗ (shivamogga), ಮೇ 15: ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರಿಗೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷಾ ವರದಿ ಸಲ್ಲಿಕೆಗೆ ಕೇಂದ್ರದ ರೈಲ್ವೆ ಮಂಡಳಿ ಬುಧವಾರ ಒಪ್ಪಿಗೆ ನೀಡಿದೆ. ಅದಕ್ಕಾಗಿ ₹1.825 ಕೋಟಿ ಹಣ ಬಿಡುಗಡೆ ಮಾಡಿದೆ ಎಂದು ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ಗುರುವಾರ ಸಂಸದರ ಕಚೇರಿ ಪ್ರಕಟಣೆ ಬಿಡುಗಡೆ ಮಾಡಿದೆ. ಶಿವಮೊಗ್ಗ, ಭದ್ರಾವತಿ, ಚನ್ನಗಿರಿ, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ ಗುಂತಕಲ್ ಮಾರ್ಗವಾಗಿ ಮಲೆನಾಡು, ಬಯಲು ಸೀಮೆ ಹಾಗೂ ಆಂಧ್ರಪ್ರದೇಶ, ತೆಲಂಗಾಣದ ನಡುವೆ ನೇರ ಸಂಪರ್ಕವನ್ನು ಈ ರೈಲು ಮಾರ್ಗ ಬೆಸೆಯಲಿದೆ.

ಭದ್ರಾವತಿ – ಚಿಕ್ಕಜಾಜೂರು ನಡುವಿನ 73 ಕಿ.ಮೀ ದೂರದ ಈ ಮಾರ್ಗ ಪೂರ್ಣಗೊಂಡಲ್ಲಿ ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಂದ ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆಗೆ ಕಬ್ಬಿಣದ ಅದಿರು ಪೂರೈಸಲು ನೆರವಾಗುವ ಜೊತೆಗೆ ವಿಐಎಸ್ ಎಲ್ ಕಾರ್ಖಾನೆಯ ಪುನಶ್ಚೇತನಕ್ಕೂ ಈ ರೈಲು ಮಾರ್ಗ ನೆರವಾಗಲಿದೆ.

ಈ ರೈಲು ಮಾರ್ಗ ನಿರ್ಮಾಣಕ್ಜೆ ಕೇಂದ್ರ ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿದೆ. ಸಮೀಕ್ಷೆ ಕಾರ್ಯ ಮುಗಿಯುತ್ತಿದ್ದಂತೆಯೇ ರೈಲು ಮಾರ್ಗ ನಿರ್ಮಾಣಕ್ಕೆ ಹಣ ಮೀಸಲಿರಿಸಿ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga, May 15: The Central Railway Board on Wednesday approved the submission of the final site survey report for the new railway line connecting Bhadravati to Chikkajajuri via Channagiri. A sum of Rs 1.825 crore has been released for the same, said Lok Sabha member BY Raghavendra.

The MP’s office issued a statement in this regard on Thursday. This rail route will provide direct connectivity between Malnad, Bayalu Seema, Andhra Pradesh and Telangana via Shimoga, Bhadravati, Channagiri, Chikkajajur, Chitradurga, Bellary and Guntakal.

shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 15 ರ ತರಕಾರಿ ಬೆಲೆಗಳ ವಿವರ
Shivamogga: Power outage in various places on July 20 th! ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ! Next post shimoga | ಶಿವಮೊಗ್ಗ ನಗರ, ತಾಲೂಕಿನ ವಿವಿಧೆಡೆ ಮೇ 17 ರಂದು ವಿದ್ಯುತ್ ವ್ಯತ್ಯಯ