
shikaripura | ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
ಶಿಕಾರಿಪುರ (shikaripur), ಮೇ 31: ಮನೆಯೊಂದರಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕಾರಿಪುರ ಪಟ್ಟಣ ಠಾಣೆ ಪೊಲೀಸರು ಆರೋಪಿಯೋರ್ವನನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ.
ಶಿಕಾರಿಪುರ ಪಟ್ಟಣದ ರಂಗನಾಥಪುರ ಕಾಲೋನಿ ನಿವಾಸಿ ಅಭಿಷೇಕ್ ಗೌಡ ಬಿ ಜೆ (25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 14,70,400 ರೂ. ಮೌಲ್ಯದ 184 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮೇ 31 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕಾರಿಪುರ ಡಿವೈಎಸ್ಪಿ ಕೇಶವ ಕೆ ಇ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಎಂ ಪಾಟೀಲ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಶರತ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಚ್.ಸಿ ಸಂತೋಷ್ ಕುಮಾರ್, ಪಿಸಿಗಳಾದ ಶಿವಾಜಿರಾವ್, ಗಿರೀಶ್ ನಾಯ್ಕ್ ಎನ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಕಳವು ಪ್ರಕರಣ : ಶಿಕಾರಿಪುರ ಪಟ್ಟಣದ ಮನೆಯೊಂದರಲ್ಲಿ 24-01-2025 ರ ರಾತ್ರಿ ಕಳವು ಕೃತ್ಯ ನಡೆದಿತ್ತು. ಬೀರುವಿನಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ಅಪಹರಿಸಲಾಗಿತ್ತು. ಈ ಸಂಬಂಧ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Shikaripura, May 31: In a case of theft of gold ornaments worth lakhs of rupees from a house, the Shikaripura Town Police Station arrested an accused and seized gold ornaments worth lakhs of rupees.