bhadravati | ಭದ್ರಾವತಿಯಲ್ಲಿ ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಸಭೆ

shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house!

ಭದ್ರಾವತಿ (bhadravathi), ಜೂನ್ 13: ಶಿವಮೊಗ್ಗ ಲೋಕಾಯುಕ್ತ ಸಂಸ್ಥೆಯು ಜೂ. 17 ರಂದು ಭದ್ರಾವತಿ ನಗರದ ತಾಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ1.15 ಗಂಟೆಯವರೆಗೆ, ಸಾರ್ವಜನಿಕರ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ.

ಈ ಕುರಿತಂತೆ ಲೋಕಾಯುಕ್ತ ಸಂಸ್ಥೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ, ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಕೊಡುವಲ್ಲಿ ವಿಳಂಬ  ನೀತಿ ಅನುಸರಿಸುತ್ತಿದ್ದರೆ,

ಕೆಲಸ ಮಾಡಲು ಲಂಚ ಕೇಳುತ್ತಿದ್ದರೆ, ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದರೆ, ಕಳಪೆ ಕಾಮಗಾರಿ ನಡೆಯುತ್ತಿದ್ದರೆ ಮತ್ತು ಕಂಡುಬಂದರೆ, ಸರ್ಕಾರಿ ನೌಕರ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರೆ,

ಸರ್ಕಾರಿ ನೌಕರ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ದೂರಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಲಿಖಿತ ಅಹವಾಲು ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga, June 13: The Shivamogga Lokayukta will hold a meeting to receive applications regarding public grievances on June 17 at the Bhadravati Nagar Taluk Panchayat Office Hall from 11 am to 1.15 pm.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →