agumbe | Landslide on Agumbe Ghati National Highway due to rain: Restrictions on heavy vehicle traffic! agumbe | ಮಳೆಯಿಂದ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೂ ಕುಸಿತ : ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ!

agumbe | ಮಳೆಯಿಂದ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೂ ಕುಸಿತ : ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ!

ಆಗುಂಬೆ (agumbe), ಜೂ. 14: ಮುಂಗಾರು ಮಳೆಯ ವೇಳೆ ಆಗುಂಬೆ ಘಾಟಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ, ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈ ಕುರಿತಂತೆ ಜೂ. 13 ರಂದು ಆದೇಶ ಹೊರಡಿಸಲಾಗಿದೆ. ಮುಂಗಾರು ಮಳೆ ಸಂದರ್ಭದಲ್ಲಿ, ಆಗುಂಬೆ ಘಾಟಿ ರಸ್ತೆಯ ಹಲವೆಡೆ ಭೂ ಕುಸಿತವಾಗುತ್ತದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ.

ಆದೇಶದಲ್ಲೇನಿದೆ? : ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶದ ವಿವರ ಈ ಮುಂದಿನಂತಿದೆ. ‘ರಾಷ್ಟ್ರೀಯ ಹೆದ್ದಾರಿ – 169 ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ಮಳೆ ಹಾಗೂ ಭಾರೀ ವಾಹನಗಳ ಸಂಚಾರದಿಂದ, ಅಲ್ಲಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ 15-6-2025 ರಿಂದ 30-9-2025 ರವರೆಗೆ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ (ಜಲ್ಲಿ ಮತ್ತು ಸರಕು ಸಾಗಾಣೆ ವಾಹನಗಳು) ನಿಷೇಧಿಸಿ, ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ರಾಷ್ಟ್ರೀಯ ಹೆದ್ಧಾರಿ ಇಲಾಖೆ ಕೋರಿಕೆ ಸಲ್ಲಿಸಿತ್ತು.

ಸದರಿಯವರ ಕೋರಿಕೆ ಹಾಗೂ ಪೊಲೀಸ್ ಇಲಾಖೆ ವರದಿ ಅನ್ವಯ ಸಾರ್ವಜನಿಕ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು, ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರ ಅನ್ವಯ ರಾಷ್ಟ್ರೀಯ ಹೆದ್ಧಾರಿ 169 ಎ ಆಗುಂಬೆ ಘಾಟಿ ಮೂಲಕ,

15-06-2025 ರಿಂದ 30-09-2025 ರವರೆಗೆ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿ, ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉಡಪಿ – ತೀರ್ಥಹಳ್ಳಿ ನಡುವೆ ಸಂಚರಿಸುವ ವಾಹನಗಳು ಬದಲಿ ಮಾರ್ಗವಾದ ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

The Udupi district administration has issued an order restricting the movement of heavy vehicles in view of the possibility of landslides on the Agumbe Ghat National Highway during the monsoon rains.

There is a possibility of landslides in places due to heavy rain and heavy vehicle traffic on National Highway – 169 A Thirthahalli – Malpe Road at Agumbe Ghati.

Power outages in various parts of Shivamogga city on December 26th! ಶಿವಮೊಗ್ಗ ನಗರದ ವಿವಿಧೆಡೆ ಡಿಸೆಂಬರ್ 26 ರಂದು ವಿದ್ಯುತ್ ವ್ಯತ್ಯಯ! Previous post shimoga | ಶಿವಮೊಗ್ಗ : ಜೂ. 17 – 18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: A young man has been sentenced to 10 years in rigorous imprisonment! ಶಿವಮೊಗ್ಗ : ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ! Next post shimoga | ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ : ತಾಯಿ, ಮಗನಿಗೆ ಜೈಲು ಶಿಕ್ಷೆ!