ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಮಾಹಿತಿ ನೀಡುವವರ ಹೆಸರು ಗೌಪ್ಯ : ದೂರುಗಳ ಪರಿಶೀಲನೆಗೆ ಪ್ರತ್ಯೇಕ ಅಧಿಕಾರಿಗಳ ತಂಡ ರಚನೆ

ಕಾಲಮಿತಿಯೊಳಗೆ ದೂರು ಇತ್ಯರ್ಥ : ಶಿವಮೊಗ್ಗ ಡಿಸಿ ಡಾ.ಆರ್.ಸೆಲ್ವಮಣಿ ಮಾಹಿತಿ

ಶಿವಮೊಗ್ಗ, ಏ. 08 : ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಸಮಯದಲ್ಲಿ ಮತದಾರರು ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದಾದ ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್‍ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ,

ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ-ವಿಜಿಲ್ ಆ್ಯಪ್‍ನಲ್ಲಿ ದೂರು ದಾಖಲಿಸಬಹುದು.

ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡ್ಕೊಂಡು  ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ.  ಅಕ್ರಮದ ಕುರಿತಾದ ಫೋಟೋ ಅಥವಾ ವೀಡಿಯೋ ಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು.

ಆ್ಯಪ್ ನಲ್ಲಿ ಸ್ವವಿವರ ನೀಡಿಯಾದರೂ ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್ ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಅಪ್ ಲೋಡ್ ಮಾಡಬಹುದು.

ಸಿ-ವಿಜಿಲ್‍ನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇವರು ಮತದಾನ ಮುಕ್ತಾಯವಾಗುವವರೆಗೂ 3 ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ.

ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸಲಿದ್ದಾರೆ. ಸಾರ್ವಜನಿಕರು ಸಿ-ವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950 ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *