
shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!
ಶಿವಮೊಗ್ಗ (shivamogga), ಜೂ. 22: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿಯ ಮೇಲೆ, ಯುವಕನೋರ್ವನನ್ನು ಬರ್ಬರವಾಗಿ ಕೊ*ಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಜೂ. 22 ರ ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದೆ.
ಹಳೇ ಬೊಮ್ಮನಕಟ್ಟೆ ಬಡಾವಣೆ 1 ನೇ ಕ್ರಾಸ್ ನಿವಾಸಿ ಅವಿನಾಶ್ (32) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಈತ ಏಳನೀರು ವ್ಯಾಪಾರ, ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.
ಮನೆಯಲ್ಲಿದ್ದ ಅವಿನಾಶ್ ರಾತ್ರಿ ಹೊರ ತೆರಳಿದ್ದು, ನಂತರ ಮನೆಗೆ ಹಿಂದಿರುಗಿರಲಿಲ್ಲ ಎನ್ನಲಾಗಿದೆ. ಮುಂಜಾನೆ ಕೆರೆ ಏರಿ ಮೇಲೆ ಕೊಲೆಗೀಡಾದ ಮೃತದೇಹ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಕಾರಣವೇನು? : ಕೊಲೆಗೀಡಾದ ಅವಿನಾಶ್ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.
#shimoga, #shivamogga, #crimenews, #bommanakatte, #shimogapolice, #shimogacrimenewsupdate, #vinobanagarapolicestation, #policestation, #vinobanagarapolicestation,