‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ

ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ.

ಶಿವಮೊಗ್ಗ, ಎ. 10: ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ
ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್
ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಆರೋಪಿಸಿದ್ದಾರೆ.

ಈ ಕುರಿತಂತೆ ಅವರು ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ ಹಾಗೂ ಸ್ವಾಭಿಮಾನದ ಸಂಕೇತವಾಗಿದೆ. ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿದೆ. ಆದರೆ ನಂದಿನಿ ಉತ್ಪನ್ನವನ್ನು ಮುಗಿಸುವ ಮೂಲಕ ರಾಜ್ಯದ ಹಾಲು ಉತ್ಪಾದಕರಿಗೆ ತೊಂದರೆ ಉಂಟು ಮಾಡುವ ಸಂಚು ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ಕೆಎಂಎಫ್‌ಗೆ ಅಮುಲ್‌ ಯಾವ ರೀತಿಯಲ್ಲೂ ಸಾಟಿಯಲ್ಲ. ನಂದಿನಿ ಉತ್ಪನ್ನಗಳು ಬೆಲೆ ಹಾಗೂ
ಗುಣಮಟ್ಟದಲ್ಲಿ ಇಡೀ ದೇಶದಲ್ಲಿಯೇ ನಂಬರ್‌ ಒನ್‌ ಸ್ಥಾನದಲ್ಲಿದೆ. ಹಾಗಾಗಿಯೇ ಹೇಗಾದರೂ
ಮಾಡಿ ಮಾರುಕಟ್ಟೆ ತಂತ್ರ ಬಳಸಿ ತನ್ನ ಉತ್ಪನ್ನಗಳ ಬೇಡಿಕೆ ಹೆಚ್ಚಿಸಿಕೊಳ್ಳಲು ಅಮೂಲ್‌ ಇಂತಹ ಕುತಂತ್ರ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ಕೆಎಂಎಫ್‌ನ ಹಾಲು, ಮೊಸರಿಗೆ ಮುಂಬೈ, ಗೋವಾ, ಹೈದರಾಬಾದ್‌, ಪೂನಾ, ಸೊಲ್ಲಾಪುರ, ಇತರೆ ಪ್ರಾಂತ್ಯದಲ್ಲಿ ಹೆಚ್ಚಿನ ಬೇಡಿಕೆ ಇದ್ದು, ಚೆನ್ನಾಗಿ ಮಾರಾಟವಾಗುತ್ತಿದೆ. ಅದನ್ನು ಅಮುಲ್‌ಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಹಾಗಾಗಿಯೇ, ಮುಂದೆ ಕೆಎಂಎಫ್‌ ಎಲ್ಲಿ ತನ್ನ ಬುಡಕ್ಕೆ ಅಪತ್ತು ತರುತ್ತದೋ ಎಂದು ಹೆದರಿ ಅಮುಲ್‌ ಇಂತಹ ಷಡ್ಯಂತ್ರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇನ್ನೂ ಉತ್ಪನ್ನಗಳ ದರ ಮತ್ತು ಗುಣಮಟ್ಟ ಸೇರಿದಂತೆ ಯಾವ ರೀತಿಯಲ್ಲೂ ಅಮುಲ್‌, ಕೆಎಂಎಫ್‌ ವಿರುದ್ಧ ಸ್ಪರ್ಧೆ ನಡೆಸಲಾಗದು. ಉದಾಹರಣೆಗೆ ಕೆಎಂಎಫ್‌ ಹಾಲಿನ ದರ ಲೀಟರ್‌ಗೆ 39ರೂ. ಇದ್ದರೆ, ಅಮುಲ್‌ ಹಾಲಿನ ದರ 54. ರೂ. ಇದೆ. ಅಂತೆಯೇ ಗುಣಮಟ್ಟವೂ ನಂದಿನಿಗಿಂತ ಚೆನ್ನಾಗಿಲ್ಲ. ಹಾಗಾಗಿ ಜನರೇ ಅಮುಲ್‌ ಉತ್ಪನ್ನಗಳನ್ನು ತಿರಸ್ಕರಿಸುತ್ತಾರೆ. ಕೆಎಂಎಫ್‌ ದೇಶದ ಅತಿದೊಡ್ಡ ಬ್ರ್ಯಾಂಡ್‌ ಆಗಿದ್ದು, ವಿದೇಶದಲ್ಲೂ ಹೆಸರು ಮಾಡಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗುಜರಾತ್ ಮೂಲದ ಸಹಕಾರ ಸಂಸ್ಥೆ ಅಮುಲ್ ಮೂಲಕ ರಾಜ್ಯದ ನಂದಿನಿಯನ್ನು ಮುಗಿಸುವ ಕುತಂತ್ರ ನಡೆಸಿದೆ. ನಂದಿನಿಯನ್ನು ಅಮುಲ್‍ನಲ್ಲಿ ವಿಲೀನಗೊಳಿಸುವ ಬಗ್ಗೆ ಕೇಂದ್ರ ಸಹಕಾರ ಸಚಿವರು ಕೊಟ್ಟಿರುವ ಹೇಳಿಕೆ ಕನ್ನಡಿಗರಿಗೆ ಆಘಾತ ಉಂಟು ಮಾಡಿದೆ. ಕರ್ನಾಟಕದ ಅಸ್ಮಿತೆಯಾದ ನಂದಿನಿಯನ್ನುಉಳಿಸಿಕೊಳ್ಳಬೇಕಾದ ಹೊಣೆ ಸರ್ಕಾರದ್ದಾಗಿದೆ ವಿನಯ್ ತಾಂದ್ಲೆ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *