
shimoga rain | ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ನೀರಿನ ಸಂಗ್ರಹದಲ್ಲಿ ಗಣನೀಯ ಹೆಚ್ಚಳ!
ಶಿವಮೊಗ್ಗ (shivamogga), ಜೂ. 28: ಕಳೆದ ಕೆಲ ದಿನಗಳಿಂದ ಜಲಾನಯನ ಪ್ರದೇಶ ವ್ಯಾಪ್ತಿಗಳಲ್ಲಿ ಬಿದ್ದ ಉತ್ತಮ ಮಳೆಯಿಂದ, ಪ್ರಮುಖ ಜಲಾಶಯಗಳಾದ ಭದ್ರಾ ಹಾಗೂ ಲಿಂಗನಮಕ್ಕಿಯಲ್ಲಿ ನೀರಿನ ಸಂಗ್ರಹದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಜೂನ್ 28 ರ ಶನಿವಾರ ಬೆಳಿಗ್ಗೆ 8 ಗಂಟೆಯ ಮಾಹಿತಿಯಂತೆ, ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ ಭದ್ರಾ ನೀರಿನ ಮಟ್ಟ 161. 4 (ಗರಿಷ್ಠ ಮಟ್ಟ : 186) ಅಡಿಗೆ ಏರಿಕೆಯಾಗಿದೆ. 21,139 ಕ್ಯೂಸೆಕ್ ಒಳಹರಿವಿದ್ದು, 1290 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನದಂದು ಭದ್ರಾ ಡ್ಯಾಂ #bhadradam ನೀರಿನ ಮಟ್ಟ 122.3 ಅಡಿಯಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಸುಮಾರು 39. 6 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ #linganamakkiDam ನ ನೀರಿನ ಮಟ್ಟ 1784. 05 (ಗರಿಷ್ಠ ಮಟ್ಟ : 1819) ಅಡಿ ತಲುಪಿದೆ. 24,752 ಕ್ಯೂಸೆಕ್ ಒಳಹರಿವಿದ್ದು, 7198 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 1748. 70 ಅಡಿಯಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ 36 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
ಉಳಿದಂತೆ ತುಂಗಾ ಜಲಾಶಯ #tungadam ಕಳೆದ ಮೇ ತಿಂಗಳಾಂತ್ಯದಲ್ಲಿ ಗರಿಷ್ಠ ಮಟ್ಟ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 40,954 ಕ್ಯೂಸೆಕ್ ಇದ್ದು, 41,151 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ.
Shivamogga, June 28: Due to the good rainfall in the basin areas over the past few days, there has been a significant increase in the water storage in major reservoirs such as Bhadra and Linganamakki.