
shimoga news | ಶಿವಮೊಗ್ಗ : ಯುವಕನ ಕೊ**ಲೆ – ಆರೋಪಿ ಅರೆಸ್ಟ್!
ಶಿವಮೊಗ್ಗ (shivamogga), ಜು. 2: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆ ಇ ಬ್ಲಾಕ್ ನ ಮನೆಯೊಂದರ ಆವರಣದಲ್ಲಿ ತಡರಾತ್ರಿ ಯುವಕನೋರ್ವನ ಕೊ**ಲೆ ನಡೆದಿದೆ.
ಬೊಮ್ಮನಕಟ್ಟೆ ಬಡಾವಣೆ ನಿವಾಸಿಯಾದ ಟೈಲ್ಸ್ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪವನ್ (28) ಕೊ**ಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ.
ಹ**ತ್ಯೆ ನಡೆಸಿದ ಆರೋಪದ ಮೇರೆಗೆ ಶಿವಕುಮಾರ್ (49) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾರಣವೇನು? : ಪವನ್ ರಾತ್ರಿ ಆರೋಪಿ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾನೆ. ಮನೆಯಲ್ಲಿಯೇ ಇಬ್ಬರು ಜೊತೆಯಾಗಿಯೇ ಮದ್ಯ ಸೇವಿಸಿ ಊಟ ಮಾಡಿದ್ದಾರೆ ಎನ್ನಲಾಗಿದೆ.
ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಕಲಹವಾಗಿದ್ದು, ಇದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಆರೋಪಿಯು ಮನೆಯಲ್ಲಿದ್ದ ಕಬ್ಬಿಣದ ಹಾರೆಯಿಂದ ಪವನ್ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಪವನ್ ಸ್ಥಳದಲ್ಲಿಯೇ ಅ**ಸುನೀಗಿದ್ದಾನೆ ಎಂದು ತಿಳಿದುಬಂದಿದೆ.
ಕೊ**ಲೆಗೆ ಕಾರಣವೇನು ಎಂಬಿತ್ಯಾದಿ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್, ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿಯಿತ್ತು ಪರಿಶೀಲಿಸಿದ್ಧಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Shivamogga, July 2: A young man was murdered late last night in the premises of a house in E Block, Bommanakkatte Layout, on the outskirts of Shivamogga city.