
bhadra dam | ಭದ್ರಾ ಜಲಾಶಯದಿಂದ 2 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ!
ಶಿವಮೊಗ್ಗ (shivamogga), ಜು. 11: ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ ಭದ್ರಾ ಜಲಾಶಯ ಗರಿಷ್ಠ ಮಟ್ಟ ತಲುಪುವುದಕ್ಕೂ ಮುನ್ನವೇ, ಡ್ಯಾಂನಿಂದ ನದಿಗೆ ನೀರನ್ನು ಹೊರಹರಿಸಲಾಗುತ್ತಿದೆ.
ಜು. 11 ರ ಶುಕ್ರವಾರ ಸಂಜೆ ಡ್ಯಾಂನಿಂದ 2 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಮುಂಗಾರು ಅವಧಿಯಲ್ಲಿ, ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಡ್ಯಾಂನ ನೀರಿನ ಸಂಗ್ರಹದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಡ್ಯಾಂಗೆ ಉತ್ತಮ ಒಳಹರಿವಿದೆ. ಪ್ರಸ್ತುತ ಡ್ಯಾಂನ ನೀರಿನ ಮಟ್ಟ 174. 4 (ಗರಿಷ್ಠ ಮಟ್ಟ : 186) ವಿದ್ದು, ಡ್ಯಾಂನ ಭದ್ರತೆಯ ದೃಷ್ಟಿಯಿಂದ ಗರಿಷ್ಠ ಮಟ್ಟ ತಲುಪಲು ಇನ್ನೂ 12 ಅಡಿ ಬಾಕಿಯಿರುವಂತೆ, ಡ್ಯಾಂನಿಂದ ನದಿಗೆ ನೀರನ್ನು ಹೊರ ಬಿಡಲಾಗುತ್ತಿದೆ.
71.53 ಟಿಎಂಸಿ ನೀರು ಸಂಗ್ರಹಣೆ ಸಾಮರ್ಥ್ಯ ಹೊಂದಿರುವ ಭದ್ರಾ ಜಲಾಶಯದಲ್ಲಿ ಹಾಲಿ 57.63 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದರಿಂದ, ಡ್ಯಾಂ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
Shimoga, Ju. 11: Bhadra Reservoir, a major reservoir in central Karnataka, is releasing water from the dam into the river before reaching its maximum level. 2 thousand cusecs of water is being released from the dam on Friday evening of June 11. During the current monsoon season, the basin is receiving good rainfall. Due to this, there has been a significant increase in the amount of water stored in the dam.