Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?

What is the free e-Pauti movement? What did Shivamogga Tahsildar Rajiv say? ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?

ಶಿವಮೊಗ್ಗ (shivamogga), ಜು. 18: ಶಿವಮೊಗ್ಗ ತಾಲೂಕಿನಲ್ಲಿ ಉಚಿತ ಇ – ಪೌತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ತಾಲೂಕಿನ ನಾಗರೀಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ರಾಜೀವ್ ವಿ ಎಸ್ ಅವರು ತಿಳಿಸಿದ್ದಾರೆ.

ಈ ಕುರಿತಂತೆ ಜು. 18 ರಂದು ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ, ಸದರಿ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ನಿಯಮಾನುಸಾರ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ.

ಜಮೀನಿನ ಹಕ್ಕು ಬದಲಾವಣೆಗೆ ಸಂಬಂಧಿಸಿದಂತೆ, ಇ-ಪೌತಿ ಆಂದೋಲನ ಹಮ್ಮಿಕೊಳ್ಳಲಾಗಿದೆ. ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ, ಜಮೀನಿನ ಹಕ್ಕು ಬದಲಾವಣೆಯ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ರೀತಿಯ ಜಮೀನುಗಳ ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇ-ಪೌತಿ ಆಂದೋಲನದ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ರಾಜೀವ್ ವಿ.ಎಸ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Shivamogga, Jul. 18: A free e-Pauti campaign has been launched in Shivamogga taluk. Tahsildar Rajiv VS has said that the citizens of the taluk should take advantage of it.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →