shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
ಶಿವಮೊಗ್ಗ (shivamogga), ಜು. 17: ಭದ್ರಾವತಿ ಹಾಗೂ ಹೊಸನಗರ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಕಾನೂನುಬಾಹಿರವಾಗಿ ಕಿರಾಣಿ ಅಂಗಡಿ ಹಾಗೂ ಹೋಟೆಲ್ ಬಳಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಮೇರೆಗೆ, ಇಬ್ಬರ ವಿರುದ್ದ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಹೊಸನಗರ ವರದಿ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ, ಕಿರಾಣಿ ಅಂಗಡಿಯೊಂದರ ಮುಂಭಾಗ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಆರೋಪಿ ವಿರುದ್ದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ಸಬ್ ಇನ್ಸ್’ಪೆಕ್ಟರ್ ರಾಜುರೆಡ್ಡಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. 6 ಮದ್ಯದ ಖಾಲಿ ಪೌಚ್ ಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿ ವಿರುದ್ದ ಕೇಸ್ ದಾಖಲಿಸಿದ್ದಾರೆ.
ಭದ್ರಾವತಿ ವರದಿ : ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ ನಂಜಾಪುರ ರಸ್ತೆಯ ಹೋಟೆಲ್ ವೊಂದರ ಮುಂಭಾಗ, ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಬ್ ಇನ್ಸ್’ಪೆಕ್ಟರ್ ಕವಿತಾ ನೇತೃತ್ವದ ಪೊಲೀಸ್ ತಂಡ ಈ ಕಾರ್ಯಾಚರಣೆ ನಡೆಸಿದೆ. 250 ರೂ. ಮೌಲ್ಯದ 5 ಮದ್ಯದ ಖಾಲಿ ಪೌಚ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Shimoga, Ju. 17: In two separate incidents in Bhadravati and Hosanagar taluks, the police have registered a case against two people for illegally consuming liquor near a grocery store and a hotel.
