Shivamogga, Jul. 22: Water will be released from the main canal of the Bhadra Upper River Project under the Visvesvaraya Jal Nigam Limited to Vani Vilas Sagar from 27-07-2025 as per the government's directive, the announcement said.

bhadra dam | ಭದ್ರಾ ಜಲಾಶಯದಿಂದ ವಾಣಿ ವಿಲಾಸ ಸಾಗರಕ್ಕೆ ನೀರು!

ಶಿವಮೊಗ್ಗ, ಜು. 22: ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ 27-07-2025 ರಿಂದ ನೀರನ್ನು ಹರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದುಹೋಗಿದೆ. 

ಸರ್ಕಾರದ ನಿರ್ದೇಶನದಂತೆ 27-07-2025 ರಿಂದ ಶಾಂತಿಪುರ ಪಂಪ್ ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್ ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಟ್ಟೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿಂದ ಹೆದ್ದೂರು, ಕಾಟಿನಗೆರೆ, ಬೆಣಕುಣಿಸೆ, ಮುಗಳಿ, ಬೇಗೂರು, ಆಸಂದಿ, 

ಹಡಗಲು, ಕಲ್ಕೆರೆ, ಹೆಚ್. ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಪುರ ಗ್ರಾಮಗಳ ಮಾರ್ಗವಾಗಿ ಹರಿದು ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ಮುಂತಾದವುಗಳನ್ನು ನಿಷೇಧಿಸಲಾಗಿದೆ.

ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್ ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Shivamogga, Jul. 22: Water will be released from the main canal of the Bhadra Upper River Project under the Visvesvaraya Jal Nigam Limited to Vani Vilas Sagar from 27-07-2025 as per the government’s directive, the announcement said.

Shivamogga : Accused robbed a teacher by pretending to be a Reels fan! ಶಿವಮೊಗ್ಗ : ರೀಲ್ಸ್ ಅಭಿಮಾನಿ ಎಂದು ಕರೆಯಿಸಿಕೊಂಡು ಶಿಕ್ಷಕನ ದರೋಡೆ ಮಾಡಿದ ಆರೋಪಿಗಳು! Previous post shimoga news update | ಶಿವಮೊಗ್ಗ : ರಸ್ತೆ ಅಪಘಾತದಲ್ಲಿ ಯುವಕ ಸಾ**ವು | ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಕಳವು |
Soraba: Accused in defacement of deity's idol arrested! ಸೊರಬ : ದೇವರಮೂರ್ತಿ ವಿರೂಪ ಪ್ರಕರಣದ ಆರೋಪಿ ಅರೆಸ್ಟ್! Next post soraba news | ಸೊರಬ : ದೇವರಮೂರ್ತಿ ವಿರೂಪ ಪ್ರಕರಣದ ಆರೋಪಿ ಅರೆಸ್ಟ್!