ಸೊರಬ (sorab), ಜು. 22: ದೇವಾಲಯದ ಆವರಣದಲ್ಲಿದ್ದ ಪುರಾತನ ಕಾಲದ ದೇವರ ಮೂರ್ತಿ ವಿರೂಪಗೊಳಿಸಿದ ಆರೋಪಿಯನ್ನು, ಸೊರಬ ತಾಲೂಕು ಆನವಟ್ಟಿ ಠಾಣೆ ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗೋಂದಿ ಗ್ರಾಮದ ನಿವಾಸಿ ಕೋಟೇಶ್ವರ (32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಜು. 21 ರ ಮಧ್ಯಾಹ್ನ ಸೊರಬ ತಾಲೂಕಿನ ಕುಬಟೂರು ಗ್ರಾಮದಲ್ಲಿರುವ ನರಸಿಂಹ ದೇವಾಲಯ ಆವರಣದಲ್ಲಿದ್ದ ನರಸಿಂಹ ಸ್ವಾಮಿ ದೇವರ ಮೂರ್ತಿಯನ್ನು ವಿರೂಪಗೊಳಿಸಲಾಗಿತ್ತು. ಈ ಕುರಿತಂತೆ ಜು. 22 ರ ಬೆಳಿಗ್ಗೆ 10 ಗಂಟೆ ವೇಳೆಗೆ ಆನವಟ್ಟಿ ಪೊಲೀಸರಿಗೆ ಮಾಹಿತಿ ಲಭಿಸಿತ್ತು.
ವಿಷಯ ತಿಳಿಯುತ್ತಿದ್ದಂತೆ ಶಿಕಾರಿಪುರ ಡಿವೈಎಸ್ಪಿ, ಆನವಟ್ಟಿ ಠಾಣೆ ಪಿಎಸ್ಐ ಚಂದನ್ ಅವರು ಸ್ಥಳಕ್ಕೆ ದೌಡಾಯಿಸಿದ್ದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.
ಪೊಲೀಸ್ ತಂಡದ ಕ್ಷಿಪ್ರ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
Soraba, Jr. 22: The accused who defaced the idol of an ancient god in the premises of the temple has been arrested by the Sorab taluk Anavatti Police within a few hours of the incident.

