ವಾಮಾಚಾರ ಮಾಡಿದ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದರು..!

ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ನಡೆಸಿ, ಸದರಿ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಭೋವಿ ಕಾಲೋನಿ ಸಮೀಪ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ! ತಡರಾತ್ರಿ ವೇಳೆ ವಾಮಾಚಾರ ನಡೆಸಲಾಗಿದೆ. ವಾಮಾಚಾರ ನಡೆಸಿದ ಸ್ಥಳದಲ್ಲಿ ಮಡಕೆಗಳು, ಅನ್ನ, ಬಿದಿರಿನ ಮರ ಹಾಗೂ ಪುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಷಿಣ-ಕುಂಕುಮ, ಗೊಂಬೆ ಸೇರಿದಂತೆ ಮೊದಲಾದ ಪೂಜಾ ಸಾಮಗ್ರಿಗಳಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಚುನಾವಣಾ ರಾಜಕಾರಣದ ಶಂಕೆ ವ್ಯಕ್ತಪಡಿಸುತ್ತಿರುವ ಸ್ಥಳೀಯ ಗ್ರಾಮಸ್ಥರು!!

ಶಿವಮೊಗ್ಗ, ಎ. 13: ರಾಷ್ಟ್ರೀಯ ಹೆದ್ಧಾರಿ ಬದಿಯ ಆಲದ ಮರವೊಂದರ ಬಳಿ ವಾಮಾಚಾರ ನಡೆಸಿ, ಸದರಿ ಸ್ಥಳದಲ್ಲಿಯೇ ಜೀವಂತ ಕುರಿ ಬಿಟ್ಟು ಹೋದ ಘಟನೆ, ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಭೋವಿ ಕಾಲೋನಿ ಸಮೀಪ ನಡೆದಿದ್ದು ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ!

ತಡರಾತ್ರಿ ವೇಳೆ ವಾಮಾಚಾರ ನಡೆಸಲಾಗಿದೆ. ವಾಮಾಚಾರ ನಡೆಸಿದ ಸ್ಥಳದಲ್ಲಿ ಮಡಕೆಗಳು, ಅನ್ನ, ಬಿದಿರಿನ ಮರ ಹಾಗೂ ಪುಟ್ಟಿಗಳು, ಮೊಟ್ಟೆ, ಬಟ್ಟೆಗಳು, ಅರಿಷಿಣ-ಕುಂಕುಮ, ಗೊಂಬೆ ಸೇರಿದಂತೆ ಮೊದಲಾದ ಪೂಜಾ ಸಾಮಗ್ರಿಗಳಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಧಾನಸಭಾ ಚುನಾವಣಾ ರಾಜಕಾರಣದ ಹಿನ್ನೆಲೆಯಲ್ಲಿ, ವಾಮಾಚಾರ ನಡೆಸಿರುವ ಅನುಮಾನಗಳಿವೆ ಎಂದು ಹೆಸರು ಬಹಿರಂಗಪಡಿಸಲಿಚ್ಚಿಸದ ಗ್ರಾಮಸ್ಥರೋರ್ವರು ಶಂಕೆ ವ್ಯಕ್ತಪಡಿಸುತ್ತಾರೆ.

ಸದ್ಯ ವಾಮಾಚಾರದ ವಿಷಯವು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿಸಿ ಬಿಸಿ ಚರ್ಚೆಗೆಡೆ ಮಾಡಿಕೊಟ್ಟಿದೆ. ವಾಮಾಚಾರ ನಡೆಸಿ, ಗ್ರಾಮಸ್ಥರಲ್ಲಿ ಭಯ ಸೃಷ್ಟಿಸುವ ಕಾರ್ಯ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *