shimoga rain | ಮಲೆನಾಡಲ್ಲಿ ಮಳೆ ಚುರುಕು : ಲಿಂಗನಮಕ್ಕಿ ಡ್ಯಾಂ ಭರ್ತಿಗೆ 14 ಅಡಿ ಬಾಕಿ
ಶಿವಮೊಗ್ಗ (shivamogga), ಜು. 24: ಮಲೆನಾಡಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಜು. 24 ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿಕಲ್ ನಲ್ಲಿ ಅತ್ಯದಿಕ 201 ಮಿಲಿ ಮೀಟರ್ (ಮಿ.ಮೀ) ಮಳೆಯಾಗಿದೆ. ಮಾಣಿಯಲ್ಲಿ 160 ಮಿ.ಮೀ., ಯಡೂರು 127 ಮಿ.ಮೀ., ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ., ಚಕ್ರಾ 135 ಮಿ.ಮೀ., ಸಾವೇಹಕ್ಲು 112 ಮಿ.ಮೀ. ಮಳೆಯಾಗಿದೆ.
ಡ್ಯಾಂ ವಿವರ : ಉಳಿದಂತೆ ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1805. 30 (ಗರಿಷ್ಠ ಮಟ್ಟ : 1819) ಅಡಿಗೆ ತಲುಪಿದೆ. ಡ್ಯಾಂನ ನೀರಿನ ಮಟ್ಟ 31,455 ಕ್ಯೂಸೆಕ್ ಇದ್ದು, 4868 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಕಳೆದ ವರ್ಷ ಇದೇ ದಿನದಂದು ಡ್ಯಾಂನ ನೀರಿನ ಮಟ್ಟ 1801 ಅಡಿಯಿತ್ತು. ಪ್ರಸ್ತುತ ಡ್ಯಾಂ ಗರಿಷ್ಠ ಮಟ್ಟ ತಲುಪಲು ಇನ್ನೂ 14 ಅಡಿ ನೀರು ಸಂಗ್ರಹವಾಗಬೇಕಾಗಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿರುವುದರಿಂದ ಪ್ರಸ್ತುತ ವರ್ಷ ಕೂಡ ಡ್ಯಾಂ ಗರಿಷ್ಠ ಮಟ್ಟ ತಲುಪುವ ಸಾಧ್ಯತೆಗಳು ಕಂಡುಬರುತ್ತಿವೆ.
ಭದ್ರಾ ಜಲಾಶಯ ಗರಿಷ್ಠ ಮಟ್ಟ ತಲುಪುವದಕ್ಕೂ ಮುನ್ನವೇ ಈಗಾಗಲೇ ಡ್ಯಾಂನಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 179. 8 (ಗರಿಷ್ಠ ಮಟ್ಟ : 186) ಅಡಿಯಿದೆ. 10,731 ಕ್ಯೂಸೆಕ್ ಒಳಹರಿವಿದ್ದು, 8451 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ತುಂಗಾ ಜಲಾಶಯ ಕಳೆದ ಎರಡು ತಿಂಗಳ ಹಿಂದೆಯೇ ಗರಿಷ್ಠ ಮಟ್ಟ ತಲುಪಿದೆ. ಪ್ರಸ್ತುತ ಒಳಹರಿವು 18,729 ಕ್ಯೂಸೆಕ್ ಇದ್ದು, 18,393 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
Shivamogga, July 24: Monsoon rains have intensified in Malnad. Heavy rains are falling in the areas under the Western Ghats. Due to this, there has been a rise in the inflow of the major reservoirs of the district.
