Shivamogga : Relatives quarrel – two stabbed! ಶಿವಮೊಗ್ಗ : ಸಂಬಂಧಿಗಳ ಜಗಳ – ಇಬ್ಬರಿಗೆ ಚೂರಿಯಿಂದ ಇರಿತ!

shimoga crime news | ಶಿವಮೊಗ್ಗ : ಗಾಂಜಾ ಸೇವಿಸಿದ್ದವನ ಬಂಧನ | ಸಾಗರ : ದೇವಾಲಯದಲ್ಲಿ ಕಳವು | ಭದ್ರಾವತಿ : ಅಕ್ರಮ ಮದ್ಯ ಮಾರಾಟ ಕೇಸ್! |

ಶಿವಮೊಗ್ಗ (shivamogga), ಜು. 29: ಗಾಂಜಾ ಸೇವನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವನ ವಿರುದ್ದ ಶಿವಮೊಗ್ಗ ತುಂಗಾ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಟಿಪ್ಪುನಗರ ಬಲಭಾಗದ 5 ನೇ ಕ್ರಾಸ್ ಬಳಿಯ ಖಾಲಿ ಜಾಗದಲ್ಲಿ ಓರ್ವ ವ್ಯಕ್ತಿಯು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಕಿರಣ್ ಮೋರೆ ಎಂಬುವರು ಸದರಿ ವ್ಯಕ್ತಿಯನ್ನು ವಿಚಾರಿಸಿದ್ದಾರೆ.

ಈ ವೇಳೆ ಮಾದಕ ವಸ್ತು ಸೇವನೆ ಮಾಡಿದ್ದು ಕಂಡುಬಂದಿದ್ದು, ಸದರಿ ವ್ಯಕ್ತಿಯನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಈ ವೇಳೆ ಗಾಂಜಾ ಸೇವನೆ ಮಾಡಿದ್ದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಪಿತ ವ್ಯಕ್ತಿ ವಿರುದ್ದ  ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಾಗರ (sagara), ಜು. 29: ದೇವಾಲಯದ ಬಾಗಿಲ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ದೇವರಮೂರ್ತಿ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿ ಪರಾರಿಯಾಗಿರುವ ಘಟನೆ ಸಾಗರ ತಾಲೂಕಿನ ಯಲಕುಂದ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಾಜೇಶ್ವರಿ ದೇವಾಲಯದಲ್ಲಿ ಘಟನೆ ನಡೆದಿದೆ. ಸುಮಾರು 30 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭದ್ರಾವತಿ (bhadravathi), ಜು. 29: ಕಿರಾಣಿ ಅಂಗಡಿಯೊಂದರ ಮುಂಭಾಗದ ರಸ್ತೆಯಲ್ಲಿ ಮದ್ಯ ಸೇವನೆಗೆ ಅವಕಾಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವ್ಯಕ್ತಿಯೋರ್ವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ಭದ್ರಾವತಿ ತಾಲೂಕಿನ ನಿರ್ಮಲಾಪುರ ಗ್ರಾಮದಲ್ಲಿ ನಡೆದಿದೆ.

ಹೊಸಮನೆ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ರಾಜೇಶ್ ಸಂಗೊಳ್ಳಿರವರು ಗಸ್ತಿನಲ್ಲಿದ್ದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 400 ರೂ. ಮೌಲ್ಯದ 8 ಪೌಚ್ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತಂತೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

shimoga district crime news details | Shivamogga : Man arrested for consuming ganja | Sagar : Theft in temple | Bhadravati : Illegal liquor sale case! | #shimoga, #crimenews, #crime,

shimoga APMC vegetable prices | Details of vegetable prices for October 10 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಅಕ್ಟೋಬರ್ 10 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 29 ರ ತರಕಾರಿ ಬೆಲೆಗಳ ವಿವರ
Bhadravati man lost lakhs of rupees by believing in Facebook ad! ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’ Next post cyber crime news | ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’