ಮತದಾನ ಬಹಿಷ್ಕಾರಕ್ಕೆ ಕರೆ ನೀಡಿದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಭೈರಾಪುರ ಮರಾಠಿ ಕ್ಯಾಂಪ್ ಗ್ರಾಮಸ್ಥರು!

ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಎನ್.ಆರ್.ಪುರ (ಚಿಕ್ಕಮಗಳೂರು), ಎ. 13: ‘ಮೂಲಸೌಕರ್ಯಗಳ ಕೊರತೆ, ಆಡಳಿತ ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಖಂಡಿಸಿ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ’ ಎಂದು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಭೈರಾಪುರ ಗ್ರಾಮದ ಮರಾಠಿ ಕ್ಯಾಂಪ್ ಗ್ರಾಮಸ್ಥರು ತಿಳಿಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರ್ಪಡೆಯಾಗುವ ತಮ್ಮ ಗ್ರಾಮಕ್ಕೆ ಸೂಕ್ತ ಸಂಪರ್ಕ ರಸ್ತೆಯಿಲ್ಲ. ಕುಡಿಯುವ ನೀರಿನ ಪೂರೈಕೆಯಿಲ್ಲ. ಅಂಗನವಾಡಿ ಕೇಂದ್ರವೂ ಇಲ್ಲ. ಮೂರು ಕಿ.ಮೀ. ದೂರದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಕಾಡಲ್ಲಿ ಪುಟಾಣಿ ಮಕ್ಕಳು ನಡೆದುಕೊಂಡು ಹೋಗಬೇಕು ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಜ್ಜನ ಕಾಲದಿಂದಲೂ ಗ್ರಾಮದಲ್ಲಿ ವಾಸಿಸಿಕೊಂಡು ಬರುತ್ತಿದ್ದೆವೆ. ಕನಿಷ್ಠ ಕುಡಿಯುವ ನೀರಿನ ಸೌಲಭ್ಯವೂ ಕಲ್ಪಿಸಿಲ್ಲ. ಗೋವಿಂದೇಗೌಡರ ಅವಧಿಯಲ್ಲಿ ಕೊಂಚ ನೆರವಾಗಿದ್ದು ಹೊರತುಪಡಿಸಿದರೆ, ಉಳಿದಂತೆ ಯಾವುದೇ ಮಂತ್ರಿಗಳು, ಶಾಸಕರು, ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಮ್ಮಗಳ ಅಹವಾಲು ಆಲಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ನಗರದ ವಿಮಾನ ನಿಲ್ದಾಣದಿಂದ 15 ಕಿ.ಮೀ. ದೂರದಲ್ಲಿ, ಶಿವಮೊಗ್ಗ – ಶೃಂಗೇರಿ ಮುಖ್ಯ ರಸ್ತೆಯಿಂದ 2 ಕಿ.ಮೀ. ದೂರದಲ್ಲಿ ನಮ್ಮ ಗ್ರಾಮವಿದೆ. ಆದಾಗ್ಯೂ ಕೂಡ ನಮ್ಮ ಗ್ರಾಮದತ್ತ ಜನಪ್ರತಿನಿಧಿಗಳು ಹಾಗೂ ಆಡಳಿತ ಗಮನಹರಿಸಿಲ್ಲ ನಿವಾಸಿಗಳು ದೂರಿದ್ದಾರೆ.  

ಈ ಕಾರಣದಿಂದ ಪ್ರಸ್ತುತ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ಇನ್ನಾದರೂ ಆಡಳಿತ ನಮ್ಮಗಳ ಅಹವಾಲು ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *