
shimoga | ಶಿವಮೊಗ್ಗ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಿಎಂ ಮಹತ್ವದ ಸಭೆ!
ಬೆಂಗಳೂರು (shivamogga), ಜು. 31: ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಸಚಿವರು, ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸುತ್ತಿರುವ ಜಿಲ್ಲಾವಾರು ಸಭೆ ಗುರುವಾರ ಕೂಡ ಮುಂದುವರಿದಿದೆ.
ಶಿವಮೊಗ್ಗ ಜಿಲ್ಲೆಯ ಪಕ್ಷದ ಶಾಸಕರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಭದ್ರಾವತಿ ಕ್ಷೇತ್ರದ ಶಾಸಕರಾದ ಬಿ ಕೆ ಸಂಗಮೇಶ್ವರ್ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭಾಗಿಯಾಗಿದ್ದರು.
ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ದಿ ಯೋಜನೆ, ಅನುದಾನ ಬಿಡುಗಡೆ ಸೇರಿದಂತೆ ಆಡಳಿತಾತ್ಮಕ ವಿಚಾರಗಳ ಕುರಿತಂತೆ ಸಿದ್ದರಾಮಯ್ಯರವರು ಪಕ್ಷದ ಶಾಸಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ವೇಳೆ ಮಧು ಬಂಗಾರಪ್ಪ, ಬಿ ಕೆ ಸಂಗಮೇಶ್ವರ್ ಹಾಗೂ ಬೇಳೂರು ಗೋಪಾಲಕೃಷ್ಣ ಅವರು ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದ ಪ್ರತ್ಯೇಕ ಮನವಿ ಪತ್ರಗಳನ್ನು ಸಿಎಂಗೆ ಅರ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
Bangalore, Ju. 31: The district-wise meeting conducted by CM Siddaramaiah with ministers and MLAs on many issues including development of assembly constituencies and grants continued on Thursday.
Siddaramaiah held a meeting with party MLAs from Shimoga district. Shimoga district in-charge minister Madhu Bangarappa, Bhadravathi constituency MLA BK Sangameshwar and Sagar constituency MLA Belur Gopalakrishna were also present in the meeting.