
shimoga | ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ!
ಶಿವಮೊಗ್ಗ (shimoga), ಆ.12: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ.
ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರಮುಖ, ಅತಿಸೂಕ್ಷö್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊAದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Order banning the use of DJ systems throughout Shivamogga district! | Shimoga, august 12: As a precautionary measure to maintain public peace and order until the Ganesh festival and Eid Milad celebrations are completed, the use of DJ systems has been banned throughout the district from 27-08-2025 to 15-09-2025, as per the order of District Collector Gurudatta Hegde.