
bengaluru | ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸೂಚನೆ – ಪರಿಹಾರ ಘೋಷಣೆ
ಬೆಂಗಳೂರು (bengaluru), ಆಗಸ್ಟ್ 15 : ಸಿಲಿಂಡರ್ ಸ್ಫೋಟದಲ್ಲಿ ಹಾನಿಗೀಡಾಗಿರುವ ಮನೆಗಳನ್ನು ಕೂಡಲೇ ದುರಸ್ತಿ ಮಾಡಿಕೊಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ. 9 ಜನರಿಗೆ ಗಾಯಾಳುಗಳಾಗಿದ್ದು, ಒಂದು ಸಾವು ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಆಡುಗೋಡಿ ಬಳಿಯ ಚಿನ್ನಯ್ಯನ ಪಾಳ್ಯ ದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದ ಬಗ್ಗೆ ಮಾಧ್ಯಮ ದವರೊಂದಿಗೆ ಮಾತನಾಡಿದರು.
ದುರದೃಷ್ಟಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಕಂಡು ಬಂದಿದೆ. ಪೊಲೀಸರು ಹಾಗೂ ಬಿಬಿಎಂಪಿಯವರ ವರದಿಯೂ ಕೂಡ ಅದೇ ಹೇಳಿದೆ. ಇಲ್ಲಿನ ಜನ ಸಣ್ಣ ಸಣ್ಣ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ.
ಕಸ್ತೂರಮ್ಮ ಅವರಿಗೆ ಸುತ್ತ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನರಸಮ್ಮ, ಫಾತಿಮಾ, ಪ್ರಮೀಳಾ,ರಾಜೇಶ್, ಸಂಜಯ ಗಾಂಧಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮುಬಾರಕ್ ಎಂಬುವರು ತೀರಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸಬ್ರಿನಾ ಬಾನು, ಕಯಾಲಾ, ಇಂದಿರಾಗಾಂಧಿ ಆಸ್ಪತ್ರೆಯಲ್ಲಿದ್ದು, ಸುಬ್ರಮಣಿ ಅಗಡಿ ಆಸ್ಪತ್ರೆ, ಶೇಖಾ, ನಜೀದುಲ್ಲಾ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
5 ಲಕ್ಷ ರೂ.ಗಳ ಪರಿಹಾರ : ಮುಬಾರಕ್ ಅವರ ಕುಟುಂಬದವರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಸುಟ್ಟ ಗಾಯಗಳಾಗಿರುವ ಕಸ್ತೂರಮ್ಮ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. 13 ಮನೆಗಳು ಹಾನಿಗೀಡಾಗಿದ್ದು ಅದನ್ನು ದುರಸ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಪೊಲೀಸರು, ಅಗ್ನಿ ಶಾಮಕ ದಳ, ಗೃಹ ಇಲಾಖೆಯವರು ಪರಿಶೀಲಿಸುತ್ತಿದ್ದು, ತ್ಯಾಜ್ಯ ವಿಲೇವಾರಿಯಾದ ನಂತರ ವರದಿ ಬಂದ ಮೇಲೆ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ. ಮೇಲ್ನೋಟಕ್ಕೆ ಸಿಲಿಂಡರ್ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ ಎಂದರು.
Bengaluru: August 15: BBMP Commissioner has been instructed to immediately repair the houses damaged in the cylinder explosion. Nine people were injured and one died, said Chief Minister Siddaramaiah.
He spoke to the media about the cylinder explosion that occurred in Chinnayyana Palya near Aadugodi today.