Huge amount of water released from Tunga and Bhadra dams: Houses inundated at Bhadravati kawalgundi area! ತುಂಗ, ಭದ್ರಾ ಡ್ಯಾಂಗಳಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ : ಭದ್ರಾವತಿಯ ಕವಲುಗುಂದಿಯಲ್ಲಿ ಮನೆಗಳು ಜಲಾವೃತ!

shimoga rain | ತುಂಗ, ಭದ್ರಾ ಡ್ಯಾಂಗಳಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ : ಭದ್ರಾವತಿಯ ಕವಲುಗುಂದಿಯಲ್ಲಿ ಮನೆಗಳು ಜಲಾವೃತ!

ಶಿವಮೊಗ್ಗ (shivamogga), ಆಗಸ್ಟ್ 18: ಮಲೆನಾಡಿನಲ್ಲಿ ಭಾರೀ ಮಳೆ ಮುಂದುವರಿದಿದೆ. ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ಆಗಸ್ಟ್ 18 ರ ಬೆಳಿಗ್ಗೆಯ ಮಾಹಿತಿಯಂತೆ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯದ ಒಳಹರಿವು 73,415 ಕ್ಯೂಸೆಕ್ ಇದ್ದು, 76,656 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಡ್ಯಾಂನಿಂದ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು ಮೈದುಂಬಿ ಹರಿಯುತ್ತಿದೆ. ಹೊರಹರಿವು ಮತ್ತಷ್ಟು ಹೆಚ್ಚಾದರೆ ನಗರದ ನದಿಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕವಿದೆ.

ಮತ್ತೊಂದೆಡೆ, ಭದ್ರಾ ಡ್ಯಾಂ ಒಳಹರಿವು 34,430 ಕ್ಯೂಸೆಕ್ ಗೆ ಏರಿಕೆಯಾಗಿದೆ. ಡ್ಯಾಂನ ನೀರಿನ ಮಟ್ಟವನ್ನು 184. 9 (ಗರಿಷ್ಠ ಮಟ್ಟ : 186) ಅಡಿಗೆ ಕಾಯ್ದುಕೊಳ್ಳಲಾಗಿದ್ದು, 39,245 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಭದ್ರಾ ಡ್ಯಾಂನಿಂದ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವುದರಿಂದ, ಭದ್ರಾವತಿ ಮೂಲಕ ಹಾದು ಹೋಗಿರುವ ಭದ್ರಾ ನದಿಯು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಹೊಸ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಹಾಗೆಯೇ ನದಿ ಪಾತ್ರದ ಕವಲುಗುಂದಿ ಏರಿಯಾದಲ್ಲಿ ಆರೇಳು ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ತಿರುವಳ್ಳುವರ್ ಸಮುದಾಯ ಭವನದಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆದು, ನಿವಾಸಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿದೆ.

ಭದ್ರಾ ಡ್ಯಾಂನಿಂದ ಹೊರ ಬಿಡುವ ನೀರಿನ ಪ್ರಮಾಣ ಹೆಚ್ಚಾದರೆ ಗುಂಡೂರಾವ್ ಶೆಡ್, ಅಂಬೇಡ್ಕರ್ ನಗರ, ಎಕಿನ್ಷಾ ಕಾಲೋನಿ ಮೊದಲಾದೆಡೆ ನೀರು ನುಗ್ಗುವ ಆತಂಕವಿದೆ. ಈಗಾಗಲೇ ನಗರಸಭೆ ಆಡಳಿತ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ.

*** ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಪ್ರಸ್ತುತ ವರ್ಷವೂ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆಗಳು ಗೋಚರವಾಗಿದ್ದು, ಜಲಾಶಯ ಭರ್ತಿಗೆ ಇನ್ನೂ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಆಗಸ್ಟ್ 18 ರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ನೀರಿನ ಮಟ್ಟ 1815. 05 (ಗರಿಷ್ಠ ಮಟ್ಟ : 1819) ಅಡಿಗೆ ತಲುಪಿದೆ. ಡ್ಯಾಂ ಭರ್ತಿಗೆ ಇನ್ನೂ ಕೇವಲ 4 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನ ಒಳಹರಿವು 59,891 ಕ್ಯೂಸೆಕ್ ಇದ್ದು, 3651 ಕ್ಯೂಸೆಕ್ ಹೊರ ಹರಿವಿದೆ.

Shivamogga, August 18: Heavy rains continue in Malnad. Due to this, rivers have started overflowing. There has been a significant increase in the inflow of major reservoirs in the district, namely Tunga, Bhadra and Linganamakki.

Heavy rains: Holiday declared for schools and colleges in Shivamogga taluk on August 29! ಭಾರೀ ಮಳೆ : ಆಗಸ್ಟ್ 29 ರಂದು ಶಿವಮೊಗ್ಗ ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ! Previous post shimoga rain | ಭಾರೀ ಮಳೆ : ಆಗಸ್ಟ್ 18 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ!
Heavy rains in and around Mani, Yadur, and Hulikal! ಮಾಣಿ, ಯಡೂರು, ಹುಲಿಕಲ್ ಸುತ್ತಮುತ್ತ ಧಾರಾಕಾರ ಮಳೆ! Next post shimoga rain | ಮಾಣಿ, ಯಡೂರು, ಹುಲಿಕಲ್ ಸುತ್ತಮುತ್ತ ಧಾರಾಕಾರ ಮಳೆ!