ಶಿವಮೊಗ್ಗ (shivamogga), ಆಗಸ್ಟ್ 20: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಮುಂಜಾಗ್ರತ ಕ್ರಮವಾಗಿ 27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ, ಪೇಪರ್ ಬ್ಲಾಸ್ಟಿಂಗ್ ಹಾಗೂ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಆಗಸ್ಟ್ 20 ರಂದು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ 27-08-2025 ರಿಂದ 15-09-2025 ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸದರಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Shivamogga, August 20: In the wake of the Ganesh festival and Eid Milad festivals, as a precautionary measure, District Collector Gurudatta Hegde has issued an order banning paper blasting and fireworks throughout the district from 27-08-2025 to 15-09-2025.

