ಶಿವಮೊಗ್ಗ (shivamogga), ಆಗಸ್ಟ್ 26: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ, ಶಿವಮೊಗ್ಗದ ಸಾಗರ ರಸ್ತೆಯ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ, ನೇರ ಸಂದರ್ಶನ ಏರ್ಪಡಿಸಲಾಗಿದೆ.
ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯಲ್ಲಿ ತೆರ್ಗಡೆ ಹೊಂದಿರುವ,
18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಸ್ವವಿವರ ಹಾಗೂ ಆಧಾರ್ ಕಾರ್ಡ್ ತರಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ: 08182-255293, 9380663606 ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Shivamogga, August 26: A live interview has been arranged by the District Employment Exchange Office on August 29 at 10 am at the District Employment Exchange Office, Guthyappa Colony, Pampanagar, Sagar Road, Shivamogga. Reputable private companies will participate in the live interview. Candidates with SSLC, PUC, ITI, Diploma and any degree will be considered.

