What is the Labor Department's instruction to owners of shops, commercial establishments, and factories? ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳ ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚನೆಯೇನು?

shimoga | ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳ ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚನೆಯೇನು?

ಶಿವಮೊಗ್ಗ (shivamogga), ಆಗಸ್ಟ್ 27: ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ – 2013 ರ ಅನುಷ್ಟಾನಕ್ಕಾಗಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನದಂತೆ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಆಂತರಿಕ ದೂರು ಸಮಿತಿ ರಚಿಸುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಆಂತರಿಕ ದೂರು ಸಮಿತಿ ರಚಿಸದವರು ತಕ್ಷಣವೇ ಸಮಿತಿ ರಚನೆ ಮಾಡಿ, ಅದರ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2013 ರ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ )ಕಾಯ್ದೆಯ ಅನುಷ್ಠಾನಕ್ಕಾಗಿ ಸರ್ವೊಚ್ಛ ನ್ಯಾಯಾಲಯವು 12-08-2025 ರಂದು ನೀಡಿರುವ ನಿರ್ದೇಶನಗಳನ್ವಯ, ಕಾಯ್ದೆಯು ಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸದಿರುವುದು ಕಂಡುಬಂದಿರುತ್ತದೆ.

ಹಾಗಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿ ರಚಿಸದಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿ ರಚಿಸಬೇಕು.

ಅದರ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ವಿನೋಬನಗರ ಸೂಡಾ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ  ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Shivamogga, August 26: The Labour Department has instructed the owners of shops, commercial establishments and factories to form an internal grievance committee as per the directions given by the Supreme Court for the implementation of the Prevention of Sexual Harassment of Women Act – 2013.

shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಆಗಸ್ಟ್ 27 ರ ತರಕಾರಿ ಬೆಲೆಗಳ ವಿವರ
deaf and dumb youth missing : Police appeal for help in finding him ಕಿವುಡ - ಮೂಗ ಯುವಕ ಕಾಣೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ Next post missing person | ಕಿವುಡ – ಮೂಗ ಯುವಕ ಕಾಣೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ