Shivamogga: Murder case accused gets stiff prison sentence! ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ!

shimoga | ಶಿವಮೊಗ್ಗ | 20 ವರ್ಷ ಕಠಿಣ ಜೈಲು ಶಿಕ್ಷೆ : 75 ಸಾವಿರ ರೂ. ದಂಡ!

ಶಿವಮೊಗ್ಗ (shivamogga), ಸೆಪ್ಟೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-1 ತೀರ್ಪು ನೀಡಿದೆ.

ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೇ ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 75 ಸಾವಿರ ರೂ. ದಂಡ ವಿಧಿಸಲಾಗಿದೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಆಗಸ್ಟ್ 30 ರಂದು ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಹೆಚ್ ಆರ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ ತೀರ್ಥಹಳ್ಳಿ ತಾಲೂಕಿನ ವ್ಯಕ್ತಿಯೋರ್ವ, 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಸಂಬಂಧ, ಮಾಳೂರು ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಕಲಂ ಹಾಗೂ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು.

ಅಂದಿನ ಸರ್ಕಲ್ ಇನ್ಸ್’ಪೆಕ್ಟರ್ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Shivamogga, August 31: The Additional District and Sessions Court (FTSC-1) of Shivamogga has sentenced a person to 20 years rigorous imprisonment in a case of sexual assault on a girl.

shimoga APMC vegetable prices | Details of vegetable prices for November 09 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 09 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 1 ರ ತರಕಾರಿ ಬೆಲೆಗಳ ವಿವರ
BJP's yatra to Dharmasthala : What did CM Siddaramaiah say? ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? Next post mysore | ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?