After Bangalore – Mysore and Hubballi special treatment facilities will also be available to patients at the Government Meggan Hospital in Shivamogga! ಬೆಂಗಳೂರು ಮೈಸೂರು ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ!

shimoga news | ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ!

ಶಿವಮೊಗ್ಗ (shivamogga), ಸೆಪ್ಟೆಂಬರ್ 3: ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದ, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ, ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಮೆಗ್ಗಾನ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ಸೆಪ್ಟೆಂಬರ್ 3 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಈಗಾಗಲೇ ಹೃದ್ರೋಗ ಮತ್ತು ನರರೋಗ ವಿಭಾಗ ಕಾರ್ಯ ನಿರ್ವಹಿಸುತ್ತಿದೆ. ಜನರಿಗೆ ಅತ್ಯುತ್ತಮ ಸೇವೆ ನೀಡುತ್ತಿದೆ.

ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ, ಹೆಚ್ಚಿನ ವಿಭಾಗಗಳ ಸೇವೆ ವಿಸ್ತರಿಸುವ ದೃಷ್ಟಿಯಿಂದ ಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿವೆ ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric), ಮೂತ್ರರೋಗ ಶಸ್ತ್ರ ಚಿಕಿತ್ಸೆ, ಕಿಡ್ನಿ ಖಾಯಿಲೆ (nephrology) ಸೇವೆಗಳು 04/09/2025 ರಿಂದ ಕಾರ್ಯರಂಭಗೊಳ್ಳಲಿವೆ. ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ ಎಂದು ಹೇಳಿದ್ದಾರೆ.

ನರರೋಗ ವಿಭಾಗವು ಸೋಮವಾರ, ಬುಧವಾರ, ಶುಕ್ರವಾರದಂದು ಮತ್ತು ನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ. ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಎ.ಬಿ.ಎ.ಆರ್.ಕೆ ಅಡಿಯಲ್ಲಿ ಉಚಿತ ಸೌಲಭ್ಯ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಗರಗಳ ನಂತರ ಹೆಚ್ಚುವರಿ ಸೂಪರ್ ಸ್ಪೆಷಾಲಿಟಿ ಸೇವೆಯನ್ನು ಒದಗಿಸುವ ಸಂಸ್ಥೆಗಳ ಪಟ್ಟಿಗೆ ಶಿವಮೊಗ್ಗ ವೈದ್ಯಕೀಯ ಸಂಸ್ಥೆ ಸೇರ್ಪಡೆಯಾಗಿರುವುದು, ಸಂಸ್ಥೆಗೆ ಸಂತಸದ ಸುದ್ದಿಯಾಗಿದೆ.

ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು, ರೋಗಿಗಳು ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮೆಗ್ಗಾನ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga, September 3: Super specialty services will be available to the public in the super specialty building of the Government Meggan Hospital, under the Shivamogga Institute of Medical Sciences, the Meggan Superintendent said in a statement.

Special trains run between Bengaluru and Shivamogga on the occasion of Diwali! ದೀಪಾವಳಿ ಪ್ರಯುಕ್ತ ಬೆಂಗಳೂರು - ಶಿವಮೊಗ್ಗ ನಡುವೆ ವಿಶೇಷ ರೈಲುಗಳ ಸೇವೆ! Previous post shimoga news | ತಾಳಗುಪ್ಪ – ಮೈಸೂರು ಎಕ್ಸ್ ಪ್ರೆಸ್ ರೈಲಿನ ವೇಳಾಪಟ್ಟಿ ಪರಿಷ್ಕರಣೆ!
Appeal to Supreme Court: Saujanya's mother should decide - CM's statement ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ Next post bengaluru | ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ