Appeal to Supreme Court: Saujanya's mother should decide - CM's statement ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ

bengaluru | ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ

ಬೆಂಗಳೂರು (bengaluru), ಸೆಪ್ಟೆಂಬರ್ 03: ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ   ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಸರ್ಕಾರದಿಂದ ಏನು ಮಾಡಬಹುದು ಎನ್ನುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಹಾಗೂ ಏರೋಡ್ರೋಂ ಅಭಿವೃದ್ಧಿಗೆ ಸಂಬಂಧಿಸಿದಂತೆ  ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಬಗ್ಗೆ ಸರ್ಕಾರದ ಮುಂದೆ  ಎರಡು ಯೋಜನೆಗಳಿವೆ. ಇಲ್ಲಿ  ಮೇಲ್ಸೇತುವೆ ಬಂದಿರುವುದರಿಂದ ಸ್ವಲ್ಪ ಅಡಚಣೆಯಾಗುತ್ತಿದೆ.  ಮೇಲ್ಸೇತುವೆ ಬರುವ ಬಗ್ಗೆ  ಮೊದಲೇ ತಿಳಿದಿರಲಿಲ್ಲ. ಇಲ್ಲಿ 200 ಎಕರೆಗಿಂತಲೂ ಹೆಚ್ಚಿನ ಸ್ಥಳವಿದ್ದು, ಜಕ್ಕೂರು ವೈಮಾನಿಕ  ತರಬೇತಿ ಶಾಲೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ರನ್ ವೇ ವಿಸ್ತರಣೆಗೆ ಪಕ್ಕದಲ್ಲಿಯೇ ಜಮೀನನ್ನು ಪಡೆಯಬೇಕು. ಇದಕ್ಕೆ  ಮೂರು ಎಕರೆಗಿಂತ ಹೆಚ್ಚು ಜಮೀನಿನ ಅಗತ್ಯವಿದೆ. ಮಾಲೀಕರು  ಜಮೀನನ್ನು ಕೊಡುವುದಿಲ್ಲ ಎಂದು ಹೇಳುತ್ತಿದ್ದು, ಬೆಲೆ ಕೂಡ ದುಬಾರಿ ಆಗಿದೆ ಎಂದರು.

ಲಭ್ಯ ಸ್ಥಳವನ್ನು  ಹೇಗೆ ಉಪಯೋಗಿಸಬೇಕು ಎಂದೂ ಚಿಂತನೆ ನಡೆಯುತ್ತಿದೆ.  ವೈಮಾನಿಕ ತರಬೇತಿ ಶಾಲೆ ನಡೆಸಬೇಕೆನ್ನುವ ನ್ಯಾಯಾಲಯದ ಆದೇಶವಿದ್ದು, ಸರ್ಕಾರ ಇನ್ನೇನು ಮಾಡಬಹುದು ಎಂದು ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸೌಜನ್ಯತಾಯಿ ನಿರ್ಧರಿಸಬೇಕು : ಸರ್ವೋಚ್ಚ ನ್ಯಾಯಾಲಯಕ್ಕೆ ಸೌಜನ್ಯ ಪ್ರಕರಣವನ್ನು ಮೇಲ್ಮನವಿ ಸಲ್ಲಿಸಿದರೆ ಅದರ ವೆಚ್ಚವನ್ನು ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಬಿಐ ಕೇಂದ್ರ ಸರ್ಕಾರ ಅಧೀನದಲ್ಲಿದ್ದು, ಆರೋಪಿಯನ್ನು ಖುಲಾಸೆ ಮಾಡಿದೆ.  ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಹೇಳುತ್ತಿದ್ದಾರೆ. ಮೇಲ್ಮನವಿಗೆ ಪ್ರಕರಣ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು ಎಂದರು.

ರಾಜಕೀಯ ಪ್ರೇರಿತ ಯಾತ್ರೆ : ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ ಎಂದರು. ಧರ್ಮಸ್ಥಳ ಚಲೋ ಅಲ್ಲ, ರಾಜಕೀಯ ಚಲೋ ಎಂದು ಹೇಳಿದರು.

ಧರ್ಮ ಪ್ರಚಾರ ಅಲ್ಲ : ಅರಮನೆ ಮೈದಾನದಲ್ಲಿ ಅಲ್ಪಸಂಖ್ಯಾತರ ಸಮಾವೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಪ್ರವಾಸಿ ವೀಸಾ ಪಡೆದು ಧರ್ಮಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಆ ರೀತಿ ಏನಿಲ್ಲ. ಆಯೋಜಕರೊಂದಿಗೆ ಈ ಬಗ್ಗೆ  ಮಾತನಾಡಿದೆ ಎಂದರು.

Bengaluru, September 3: Chief Minister Siddaramaiah spoke to reporters in Bengaluru on 3/9/2025. He said that the Dharmasthala Soujanya case should be decided by the Soujanya mother whether it is suitable for appeal.

After Bangalore – Mysore and Hubballi special treatment facilities will also be available to patients at the Government Meggan Hospital in Shivamogga! ಬೆಂಗಳೂರು ಮೈಸೂರು ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ! Previous post shimoga news | ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಂತರ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ರೋಗಿಗಳಿಗೆ ಲಭ್ಯವಾಗಲಿದೆ ವಿಶೇಷ ಚಿಕಿತ್ಸಾ ಸೌಲಭ್ಯ!
shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 4 ರ ತರಕಾರಿ ಬೆಲೆಗಳ ವಿವರ