bhadravati | ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ : ಎಸ್ಪಿ ಹೇಳಿದ್ದೇನು?

Accused of shouting pro-Pak slogans in Bhadravati: What did the Shimoga SP say? ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ : ಶಿವಮೊಗ್ಗ ಎಸ್ಪಿ ಹೇಳಿದ್ದೇನು?

ಶಿವಮೊಗ್ಗ (shivamogga), ಸೆಪ್ಟೆಂಬರ್ 9: ‘ಭದ್ರಾವತಿಯಲ್ಲಿ ನಿನ್ನೆ (ಸೆಪ್ಟೆಂಬರ್ 8) ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಸದರಿ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸುವ ಕಾರ್ಯ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಸೆಪ್ಟೆಂಬರ್ 9 ರಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಎಫ್ಐಆರ್ ದಾಖಲಿಸಿ, ವಿಡಿಯೋದಲ್ಲಿರುವ ವ್ಯಕ್ತಿಗಳನ್ನು ಗುರುತಿಸಲಾಗುತ್ತಿದೆ ಎಂದು ಎಂದು ಸ್ಪಷ್ಟಪಡಿಸಿದ್ದಾರೆ.

ಹಾಗೆಯೇ ವಿಡಿಯೋ ಚಿತ್ರೀಕರಿಸಿದ್ದು ಎಲ್ಲಿ? ಯಾವಾಗ? ಯಾರೆಲ್ಲ ವಿಡಿಯೋದಲ್ಲಿದ್ದಾರೆ? ಎಂಬುವುದು ಸೇರಿದಂತೆ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲಾಗುವುದು. ಈ ಕುರಿತಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.

ಏನೀದು ವಿಡಿಯೋ? : ಸೆಪ್ಟೆಂಬರ್ 8 ರಂದು ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ, ಕೆಲವರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂಬ ವಿಡಿಯೋ ತುಣುಕೊಂದು ವೈರಲ್ ಆಗಿದೆ. ಈ ಕುರಿತಂತೆ ಪೊಲೀಸ್ ತನಿಖೆಯಿಂದ ಹೆಚ್ಚಿನ ವಿವರಗಳ ಲಭ್ಯವಾಗಬೇಕಾಗಿದೆ.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →