
shimoga | ದಸರಾ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲು ಸಂಚಾರ
ಶಿವಮೊಗ್ಗ (shivamogga), ಸೆಪ್ಟೆಂಬರ್ 15: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ಮೂರು ದಿನಗಳಂದು ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ – 06587 ಯಶವಂತಪುರ –ತಾಳಗುಪ್ಪ ಎಕ್ಸ್‌ಪ್ರೆಸ್ ವಿಶೇಷ ರೈಲು, ಸೆಪ್ಟೆಂಬರ್ 19, 26 ಮತ್ತು ಅಕ್ಟೋಬರ್ 3 ರಂದು ಸಂಚರಿಸಲಿದೆ.
ರಾತ್ರಿ 10.30 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರು ದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ– ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 20, 27 ಮತ್ತು ಅಕ್ಟೋಬರ್ 4 ರಂದು ತಾಳಗುಪ್ಪದಿಂದ ಬೆಳಿಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.
ಈ ವಿಶೇಷ ರೈಲು ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ ಗಳು ಇರಲಿವೆ ಎಂದು ನೈರುತ್ಯ ರೈಲ್ವೆ ವಲಯದ ಮೈಸೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪೃಥ್ವಿ ಎಸ್ ಹುಲ್ಲತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Shivamogga, September 15: In order to relieve the extra passenger congestion during the Dasara festival, the South Western Railway has decided to run a special express train between Yeshwantpur and Talaguppa on three days. Train No. – 06587 Yesvantpur – Thalguppa Express Special Train will run on September 19, 26 and October 3