
shimoga | ಶಿವಮೊಗ್ಗ : ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಸಿಎ ನಿವೇಶನ ಮಂಜೂರು ಕೋರಿ ಮನವಿ
ಶಿವಮೊಗ್ಗ (shivamogga), ಸೆಪ್ಟೆಂಬರ್ 16: ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಸರ್ಕಾರಿ ಶಾಲೆಗೆ, ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸಿಎ ನಿವೇಶನ ಮಂಜೂರು ಮಾಡುವಂತೆ ಕೋರಿ, ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರಿಗೆ ಶಾಲೆಯ ಪ್ರಾಂಶುಪಾಲ ಕಿರಣ್ ಜವಾಜಿ ಅವರು ಮಂಗಳವಾರ ಮನವಿ ಮಾಡಿದರು.
ಕೆಪಿಎಸ್’ಸಿ ಮಾದರಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರಣದಿಂದ ಸೋಮಿನಕೊಪ್ಪ ಸುತ್ತಮುತ್ತಲು ಸೂಕ್ತ ನಿವೇಶನ ಮಂಜೂರು ಮಾಡುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ.
ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಅವರು ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಆದ್ಯತೆಯ ಮೇಲೆ ಸಿಎ ನಿವೇಶನ ಮಂಜೂರು ಮಾಡಲಾಗುವುದು. ಈ ಸಂಬಂಧ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಾಲಾವಕಾಶ : ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅಧ್ಯಕ್ಷರು ಮಾತನಾಡಿ, ಪ್ರಾಧಿಕಾರದಿಂದ ಸಿಎ ನಿವೇಶನ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಸಿಎ ನಿವೇಶನ ಅಗತ್ಯವಿರುವ ಸಂಘಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು ಸೂಕ್ತ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Shivamogga, September 16: Kiran Jawaji, the principal of the school, requested H.S. Sundaresh, the chairman of the Shivamogga-Bhadravati Urban Development Authority, to allocate a suitable CA site for the construction of an additional building for the Maulana Azad Government School in Sominakoppa, Shivamogga.