shimoga | Shivamogga: Residents appeal for opening of Anganwadi center ಶಿವಮೊಗ್ಗ : ಅಂಗನವಾಡಿ ಕೇಂದ್ರ ಪ್ರಾರಂಭಕ್ಕೆ ನಿವಾಸಿಗಳ ಮನವಿ

shimoga | ಶಿವಮೊಗ್ಗ : ಅಂಗನವಾಡಿ ಕೇಂದ್ರ ಪ್ರಾರಂಭಕ್ಕೆ ನಿವಾಸಿಗಳ ಮನವಿ

ಶಿವಮೊಗ್ಗ (shivamogga), ಸೆಪ್ಟೆಂಬರ್ 16: ಮಹಾನಗರ ಪಾಲಿಕೆ 1 ನೇ ವಾರ್ಡ್ ಕರ್ನಾಟಕ ಗೃಹ ಮಂಡಳಿ ಬಡಾವಣೆಯಲ್ಲಿ ಅಂಗನವಾಡಿ ಕೇಂದ್ರ ಪ್ರಾರಂಭಕ್ಕೆ ಕ್ರಮಕೈಗೊಳ್ಳಬೇಕೆಂದು, ಸುತ್ತಮುತ್ತಲಿನ ಬಡಾವಣೆ ನಿವಾಸಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಮನವಿ ಮಾಡಿದ್ದಾರೆ.

ಸೆಪ್ಟೆಂಬರ್ 16 ರಂದು ತಾಲೂಕು ಶಿಶು ಯೋಜನಾಭಿವೃದ್ದಿ ಅಧಿಕಾರಿ ಗಂಗಾಬಾಯಿ ಸಿ ಅವರಿಗೆ ನಿವಾಸಿಗಳು ಮನವಿ ಪತ್ರ ಅರ್ಪಿಸಿದ್ದಾರೆ.

ಬಡಾವಣೆಯಲ್ಲಿ ಅಂಗನವಾಡಿ ಕೇಂದ್ರ ಸ್ಥಾಪನೆಯಿಂದ ಸ್ಥಳೀಯ ನಿವಾಸಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಮಕ್ಕಳಿಗೆ ಹಾಗೂ ಗರ್ಭಿಣಿ ಮಹಿಳೆಯರಿಗೆ ಸರ್ಕಾರದ ಸೌಲಭ್ಯಗಳು ಸುಲಭವಾಗಿ ದೊರಕಲಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಸದ್ಯ ಬಡಾವಣೆಯಿಂದ ಒಂದೆರೆಡು ಕಿ.ಮೀ. ದೂರದ ಪ್ರದೇಶಗಳಲ್ಲಿ ಅಂಗವನಾಡಿಗಳಿವೆ. ಸದರಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಸೇರ್ಪಡೆ ಮಾಡಲು ತೊಂದರೆಯಾಗಿ ಪರಿಣಮಿಸಿದೆ. ಹಾಗೆಯೇ ಸಮರ್ಪಕವಾಗಿ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗದಂತಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಿಡಿಪಿಓ ಕಚೇರಿ ಸೂಪರ್ ವೈಸರ್ ರೇಖಾ, ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಪತ್ರಕರ್ತ ಬಿ ರೇಣುಕೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಬು, ಪ್ರಮುಖರಾದ ಕುಶಕುಮಾರ್, ಗುರುಚರಣ್, ನಾಗರತ್ನ, ಹರ್ಷಿತಾ, ಸೌಮ್ಯ ಮೊದಲಾದವರಿದ್ದರು.  

Shivamogga, September 16: Residents of the surrounding area have requested the Women and Child Development Department to take steps to open an Anganwadi center in the Karnataka Housing Board Layout, Ward 1 of the Municipal Corporation.

Shimoga: Request for sanction of suitable CA site for construction of government school building ಶಿವಮೊಗ್ಗ : ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸಿಎ ನಿವೇಶನ ಮಂಜೂರು ಕೋರಿ ಮನವಿ Previous post shimoga | ಶಿವಮೊಗ್ಗ : ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಸಿಎ ನಿವೇಶನ ಮಂಜೂರು ಕೋರಿ ಮನವಿ
shimoga APMC vegetable prices | Details of vegetable prices for September 26 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26 ರ ತರಕಾರಿ ಬೆಲೆಗಳ ವಿವರ Next post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 17 ರ ತರಕಾರಿ ಬೆಲೆಗಳ ವಿವರ