
bengaluru | ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
ಬೆಂಗಳೂರು (bangalore), ಸೆಪ್ಟೆಂಬರ್ 24: ಅಕ್ಟೋಬರ್ 1, 2025 ರಿಂದ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಜಾರಿಯಾಗಲಿದೆ.
ಸದರಿ ಯೋಜನೆಯಡಿ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಲಭ್ಯವಾಗಲಿದೆ.
ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತವಾಗಲಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ. ನೌಕರರ ವರ್ಗವಾರು ವಂತಿಗ ಕಡಿತ ವಿವರ ಈ ಕೆಳಕಂಡಂತಿದೆ.
ಗ್ರೂಪ್ ಎ: 1,000, ಗ್ರೂಪ್ ಬಿ: 500, ಗ್ರೂಪ್ ಸಿ: 350, ಗ್ರೂಪ್ ಡಿ: 250 ರೂ. ಕಡಿತವಾಗಲಿದೆ. ಸದರಿ ಯೋಜನೆಯಡಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ನಗದು ರಹಿತವಾಗಿ ಪಡೆಯಲು ಸಹಾಯಕವಾಗಲಿದೆ ಎಂದು ತಿಳಿಸಿದೆ.
ರಾಜ್ಯಾಧ್ಯಕ್ಷರ ಧನ್ಯವಾದ : ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಸಂಘದ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 24 ರಂದು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸೇರಿದಂತೆ 25 ಲಕ್ಷ ಫಲಾನುಭವಿಗಳು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ಈ ಯೋಜನೆಗೆ ವಾರ್ಷಿಕ 500 ಕೋಟಿ ರೂ. ಅನುದಾನ ಕಾಯ್ದಿರಿಸಿದೆ. ಪತಿ – ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದರೆ, ಓರ್ವರು ಮಾತ್ರ ವಂತಿಕೆ ನೀಡಬೇಕಿದೆ. ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೆ ಇರುವ ನೌಕರರು ಲಿಖಿತವಾಗಿ ದಿನಾಂಕ 18-10-2025 ರೊಳಗೆ ಸಂಬಂಧಿಸಿದ ಬಟವಾಡೆ ಅಧಿಕಾರಿಗಳಿಗೆ (ಡಿಡಿಓ) ನೀಡುವುದು.
ರಾಜ್ಯ ಸರ್ಕಾರದ ಅಧಿಕಾರಿ / ನೌಕರರ ತಂದೆ – ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು, 17 ಸಾವಿರ ರೂ.ಗಳಿಂದ 27 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಸರ್ಕಾರಿ ಮಹಿಳಾ ನೌಕರರ ತಂದೆ – ತಾಯಂದಿರೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸಲಿದೆ ಎಂದು ಅಧ್ಯಕ್ಷ ಸಿ ಎಸ್ ಷಡಾಕ್ಷರಿ ತಿಳಿಸಿದ್ದಾರೆ.
Bengaluru, September 24: The Karnataka Arogya Sanjeevini scheme, which provides cashless treatment, will be implemented from October 1, 2025. Under the said scheme, cashless medical treatment will be available to state government employees and their families.
The state government’s move to implement the Arogya Sanjeevini scheme for state government employees is welcome. State Government Employees Association state president CS Shadakshari said that he would like to thank CM Siddaramaiah and DCM DK Shivakumar on behalf of the association.