
shimoga rain | ವಾಯುಭಾರ ಕುಸಿತ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮತ್ತೆ ಮಳೆ ಚುರುಕು!
ಶಿವಮೊಗ್ಗ (shivamogga), ಸೆಪ್ಟೆಂಬರ್ 29: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಯ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ವರದಿಗಳು ಬಂದಿವೆ.
ಸೆಪ್ಟೆಂಬರ್ 29 ರ ಬೆಳಿಗ್ಗೆಯ ಮಾಹಿತಿಯಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ಘಟ್ಟ ಪ್ರದೇಶಗಳಾದ ಮಾಣಿಯಲ್ಲಿ 79 ಮಿಲಿ ಮೀಟರ್ (ಮಿ.ಮೀ.), ಯಡೂರು 62 ಮಿ.ಮೀ., ಹುಲಿಕಲ್ 129 ಮಿ.ಮೀ., ಮಾಸ್ತಿಕಟ್ಟೆ 124 ಮಿ.ಮೀ., ಚಕ್ರಾ 165 ಮಿ.ಮೀ., ಸಾವೇಹಕ್ಲುವಿನಲ್ಲಿ 146 ಮಿ.ಮೀ ಮಳೆಯಾಗಿದೆ.
ಮತ್ತೊಂದೆಡೆ, ಜಿಲ್ಲೆಯ ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿಯೂ ಏರಿಕೆ ಕಂಡುಬಂದಿದೆ. ಸೆ. 29 ರ ಬೆಳಿಗ್ಗೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂ ಒಳಹರಿವು 25,010 ಕ್ಯೂಸೆಕ್ ಗೆ ಹೆಚ್ಚಳವಾಗಿದೆ.
ಉಳಿದಂತೆ ಭದ್ರಾ ಡ್ಯಾಂ ಒಳಹರಿವು 1942 ಕ್ಯೂಸೆಕ್ ಹಾಗೂ ತುಂಗಾ ಜಲಾಶಯದ ಒಳಹರಿವು 10,314 ಕ್ಯೂಸೆಕ್ ಇದೆ. ಈಗಾಗಲೇ ಜಲಾಶಯಗಳು ಗರಿಷ್ಠ ಮಟ್ಟ ತಲುಪಿರುವುದರಿಂದ, ಡ್ಯಾಂನಿಂದ ಹೊರಬಿಡುತ್ತಿರುವ ನೀರಿನ ಪ್ರಮಾಣವು ಕೂಡ ಹೆಚ್ಚಾಗಿದೆ.
ಮುನ್ಸೂಚನೆ : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಇಂದಿನಿಂದ 6 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
Shivamogga, September 29: Due to the impact of the low pressure area in the Bay of Bengal, rains have intensified again in various parts of Shivamogga district. There have been reports of widespread rainfall in the Western Ghats areas of the district.