ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚನ್ನಬಸಪ್ಪ (ಚೆನ್ನಿ) ಆಯ್ಕೆ..!

ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

-ಬಿ.ರೇಣುಕೇಶ್-

ಶಿವಮೊಗ್ಗ, ಎ. 19: ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಎಸ್.ಈಶ್ವರಪ್ಪರವರು, ಕಳೆದ ವಾರ ಪಕ್ಷದ ಹೈಕಮಾಂಡ್ ಸೂಚನೆಯಂತೆ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಅವರ ಬೆಂಬಲಿಗರು ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹಾಕಿದ್ದರು. ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಕೆ.ಇ.ಕಾಂತೇಶ್ ಚರ್ಚಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೇ, ಬಿ.ಎಸ್.ಯಡಿಯೂರಪ್ಪ ಪಾಳೇಯದಲ್ಲಿ ಗುರುತಿಸಿಕೊಂಡಿರುವ ಕೆಲ ನಾಯಕರು ಟಿಕೆಟ್ ಲಾಬಿ ತೀವ್ರಗೊಳಿಸಿದ್ದರು. ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ರಾಜ್ಯ ನಾಯಕರು ತದ್ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿಬಂದಿದ್ದವು.

ಕೊನೆಗೂ ಬಹು ನಿರೀಕ್ಷಿತ, ವಿಳಂಬಿತ, ಇಡೀ ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಅನಿರೀಕ್ಷಿತ, ಅಚ್ಚರಿ ಎಂಬಂತೆ ಮಹಾನಗರ ಪಾಲಿಕೆ ಕಾರ್ಪೋರೇಟರ್ ಎಸ್.ಎನ್.ಚನ್ನಬಸಪ್ಪ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಇದರಿಂದ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದೆ!

ಕೆಲವರು ಕೆ.ಎಸ್.ಈ ಪುತ್ರನ ಪರ ವಕಾಲತ್ತು ವಹಿಸಿದ್ದರೆ, ಕೆಲವರು ಬಿ.ಎಸ್.ಯಡಿಯೂರಪ್ಪ ಪಾಳೇಯದಲ್ಲಿ ಗುರುತಿಸಿಕೊಂಡಿರುವ ಕೆಲ ಮುಖಂಡರ ಪರ ಲಾಬಿ ನಡೆಸುತ್ತಿದ್ದಾರೆ ಎಂಬ ಮಾತುಗಳು  ಕೇಳಿಬಂದಿದ್ದವು. ಇದರಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿತ್ತು.

ಶಿವಮೊಗ್ಗ ಅಭ್ಯರ್ಥಿ ಆಯ್ಕೆ ಕುರಿತಂತೆ ಬಿಜೆಪಿ ವರಿಷ್ಠರು ಸಮಗ್ರ ಮಾಹಿತಿ ಕಲೆ ಹಾಕಲಾರಂಭಿಸಿದ್ದರು. ಈಶ್ವರಪ್ಪ ಪಾಳೇಯದಲ್ಲಿ ಗುರುತಿಸಿಕೊಂಡಿದ್ದ, ಲಿಂಗಾಯತ ಸಮುದಾಯಕ್ಕೆ ಸೇರಿದ ಹಾಗೂ ಕಟ್ಟಾ ಹಿಂದುತ್ವ ಪ್ರತಿಪಾದಕರಾದ ಎಸ್.ಎನ್.ಚನ್ನಬಸಪ್ಪ ಅವರಿಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದ ಚೆನ್ನಿ!

*** ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ, ಗೋ ಮಾಂಸ ಭಕ್ಷಣೆ ವಿವಾದ ಭುಗಿಲೆದ್ದಿತ್ತು. 2015 ರ ನವೆಂಬರ್ ತಿಂಗಳಲ್ಲಿ ಶಿವಮೊಗ್ಗ ನಗರದ ಗೋಪಿ ಸರ್ಕಲ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ, ಚನ್ನಬಸಪ್ಪ (ಚೆನ್ನಿ) ಅವರು ಭಾಷಣ ಮಾಡುವ ವೇಳೆ, ಸಿದ್ದರಾಮಯ್ಯ ತಲೆ ಕಡಿಯುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಅವರ ವಿರುದ್ದ ಎಫ್.ಐ.ಆರ್. ದಾಖಲಾಗಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಲಯವು ಜಾಮೀನಿನ ಮೇಲೆ ಬಿಡುಗಡೆಗೊಳಿಸಿತ್ತು.

ಕುಟುಂಬ ರಾಜಕಾರಣದ ವಿರುದ್ದ ರಾಜೀನಾಮೆ ನೀಡಿದ್ದರು!

*** 2016 ರಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ವೇಳೆ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿಯಾಗಿದ್ದ ಚನ್ನಬಸಪ್ಪ ಅವರು, ಕುಟುಂಬ ರಾಜಕಾರಣದ ವಿರುದ್ದ ಸಿಡಿದೆದಿದ್ದರು! ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಗಮನ ಸೆಳೆದಿದ್ದರು

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *