'BJP members who missed the GBA meeting are opponents of Bengaluru's development' - CM Siddaramaiah criticizes ‘ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು’ - ಸಿಎಂ ಸಿದ್ದರಾಮಯ್ಯ ಟೀಕೆ

cm siddaramaiah in koppal | ಪ್ರತ್ಯೇಕ ಲಿಂಗಾಯಿತ ಧರ್ಮ ಚರ್ಚೆ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಕೊಪ್ಪಳ (koppal), ಅಕ್ಟೋಬರ್ 6 : ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ.

ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಹೇಳಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ : ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಟೀಕಿಸಿದರು.

ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದ ಅರ್ಪಿಸಿದರು.

ಬಲ್ಡೋಟಾ  ಕಾರ್ಖಾನೆ : ಬಲ್ಡೋಟಾ  ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ : ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ : ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ.  ಈ ಬಗ್ಗೆ ಜನರ ನಿಲುವೇ ನನ್ನ ನಿಲುವು  ಎಂದು ಉತ್ತರಿಸಿದ್ದಾರೆ.

ಗ್ಯಾರಂಟಿ : ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಕೆಮ್ಮಿನ ಔಷಧಿ : ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Koppal, October 6: There is no question of oppressing any caste in the economic, social and educational survey of the people. Chief Minister Siddaramaiah said that those who do not want an equal society are opposing the survey. He spoke to the media in Koppal today. Responding to a question about the Chief Minister’s stance on declaring Lingayat religion as a separate religion, he said, “Just as people voluntarily declare their religion, surveyors will list religion. My stance on this is the people’s stance.”

Shivamogga : Relatives quarrel – two stabbed! ಶಿವಮೊಗ್ಗ : ಸಂಬಂಧಿಗಳ ಜಗಳ – ಇಬ್ಬರಿಗೆ ಚೂರಿಯಿಂದ ಇರಿತ! Previous post shimoga crime news | ಶಿವಮೊಗ್ಗ : ಸಂಬಂಧಿಗಳ ಜಗಳ – ಇಬ್ಬರಿಗೆ ಚೂರಿಯಿಂದ ಇರಿತ!
Shivamogga: Power outages in various places on October 9th! ಶಿವಮೊಗ್ಗ : ಅಕ್ಟೋಬರ್ 9 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ! Next post shimoga | power cut news | ಶಿವಮೊಗ್ಗ : ಅಕ್ಟೋಬರ್ 9 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!