
bengaluru | ಸಮೀಕ್ಷೆ : ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – PUC ಉಪನ್ಯಾಸಕರಿಗೆ ವಿನಾಯ್ತಿ!
ಬೆಂಗಳೂರು (bengaluru), ಅಕ್ಟೋಬರ್ 07: ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಶೇ. 97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷದ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಹೇಳಿದ್ದಾರೆ.
Bengaluru, october 7: The educational, economic and social survey of the people of the state has begun from September 2. The teachers’ association has requested an additional 10 days. Siddaramaiah said that this request has been granted and a holiday has been declared for government and aided schools till October 18.