Shivamogga: Murder case accused gets stiff prison sentence! ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ!

shimoga court news | ಶಿವಮೊಗ್ಗ : ಕೊಲೆ ಪ್ರಕರಣದ ಆರೋಪಿಗೆ ಕಠಿಣ ಜೈಲು ಶಿಕ್ಷೆ!

ಶಿವಮೊಗ್ಗ (shivamogga), ಅಕ್ಟೋಬರ್ 8: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯುವಕನೋರ್ವನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ನಿವಾಸಿಯಾದ ಅಜ್ಗರ್ ಖಾನ್ (21) ಶಿಕ್ಷೆಗೊಳಗಾದ ಯುವಕ ಎಂದು ಗುರುತಿಸಲಾಗಿದೆ. ಅಪರಾಧಿಗೆ  ಜೈಲು ಶಿಕ್ಷೆಯ ಜೊತೆಗೆ 10 ಸಾವಿರ ರೂ. ದಂಡ ಕೂಡ ನ್ಯಾಯಾಲಯ ವಿಧಿಸಿದೆ.

ನ್ಯಾಯಾಧೀಶರಾದ ಯಶವಂತ್ ಕುಮಾರ್ ರವರು 8-10-2025 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶಾಂತರಾಜ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : 9-8-2021 ರಂದು ಬಾಪೂಜಿನಗರದ ನಿವಾಸಿಯಾದ ರಾಹಿಲ್ (21) ಎಂಬ ಯುವಕನನ್ನು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಲೆ ಪ್ರಕರಣದ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ನ್ಯಾಯಾಲಯದ ವಿಚಾರಣೆ ವೇಳೆ ಅಜ್ಗರ್ ಖಾನ್ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆತನಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.

Shivamogga, October 8: The 3rd Additional District and Sessions Court of Shivamogga has sentenced a youth to 7 years rigorous imprisonment in connection with a murder case.

Shivamogga's Doddapet police arrested a rowdy sheeter by firing him in the leg. ಶಿವಮೊಗ್ಗ : ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡು! – ಕಾರಣವೇನು? Previous post Shimoga BREAKING NEWS | ಶಿವಮೊಗ್ಗ : ರೌಡಿ ಶೀಟರ್ ಕಾಲಿಗೆ ಪೊಲೀಸ್ ಗುಂಡು! – ಕಾರಣವೇನು?
Shivamogga: Petition seeking action against lawyer who threw shoe at Supreme Court judge ಶಿವಮೊಗ್ಗ : ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮನವಿ Next post shimoga | ಶಿವಮೊಗ್ಗ : ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆದ ವಕೀಲನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮನವಿ