shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!

shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house!

ಶಿವಮೊಗ್ಗ (shivamogga), ಅಕ್ಟೋಬರ್ 14: ಶಿವಮೊಗ್ಗ ನಗರದ  ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿರುವ, ಅಧಿಕಾರಿಯೋರ್ವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಅಕ್ಟೋಬರ್ 14 ರ ಬೆಳಿಗ್ಗೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸುತ್ತಿರುವ ಸಂಗತಿ ತಿಳಿದುಬಂದಿದೆ.

ದಾವಣಗೆರೆಯ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ದಿ ನಿಯಮಿತದ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಜಗದೀಶ್ ನಾಯ್ಕ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ದಾವಣಗೆರೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

Shivamogga, October 14: It has been learnt that the Lokayukta police conducted a surprise raid on the house of an officer in Indira Gandhi Layout, Shivabasava Nagar, Savalanga Road, Shivamogga city on October 14 and conducted an inspection.

Follow us on social media

B. Renukesha

About B. Renukesha

ಬಿ_ರೇಣುಕೇಶ್, ಪತ್ರಕರ್ತರು ಸುದ್ದಿ-ಮಾಹಿತಿಗೆ ಸಂಪರ್ಕಿಸಿ Email: udayasaakshi@gmail.com Mobile : 9242987506

View all posts by B. Renukesha →